ಕಡಬ ತಾಲೂಕು ಮಟ್ಟದ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಕಡಬ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕಡಬ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸದಸ್ಯರ ನವಜೀವನೋತ್ಸವ ಕಾರ್ಯಕ್ರಮ ಕಡಬ ತಾಲೂಕಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಶಿವಪ್ರಸಾದ್ ಮೈಲೇರಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಮಹೇಶ್ ಕೆ. ಸವಣೂರು ರವರು ವಹಿಸಿ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ವತಿಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯದ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾದ ಶ್ರೀ ಸಂತೋಷ್ ಕೇಂದ್ರ ಒಕ್ಕೂಟದ ಸಮಿತಿ ಅಧ್ಯಕ್ಷರು ಮಾತನಾಡುತ್ತಾ ಪೂಜ್ಯ ಖಾವಂದರು ಲಕ್ಷಾಂತರ ಕುಟುಂಬದ ಬಾಳಿಗೆ ಬೆಳಕಾಗಿದ್ದಾರೆ. ನವಜೀವನ ಸಮಿತಿ ಸದಸ್ಯರು ಕ್ಷೇತ್ರದ ಋಣವನ್ನು ಯಾವತ್ತೂ ಮರೆಯಬಾರದು ಎಂದರು. ಕಡಬ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮೇದಪ್ಪ ಗೌಡ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಆಡಳಿತ ಯೋಜನಾಧಿಕಾರಿ ಶ್ರೀ ಮಾಧವ ಗೌಡ ರವರು ಜನಜಾಗೃತಿ ವೇದಿಕೆಯಿಂದ ನಡೆಯುವ ಕಾರ್ಯಕ್ರಮಗಳು ಮತ್ತು ನವಜೀವನ ಸಮಿತಿ ಬಲವರ್ಧನೆ ಕುರಿತು ಮಾಹಿತಿ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು ವಲಯ ಮಟ್ಟದಲ್ಲಿ ನವಜೀವನ ಸಮಿತಿ ರಚನೆ, ಮನೆ ಭೇಟಿ, ಫ್ರೀ ಕಾನ್ಫರೆನ್ಸ್ ಸಭೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರಾದ ಸುಬ್ರಾಯ ಗೌಡ ಮತ್ತು ಶ್ರೀಮತಿ ಕಮಲಾ ಸಂಜೀವ ರವರು ತಮ್ಮ ಜೀವನದ ಅನುಭವವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಜನಜಾಗೃತಿ ವೇದಿಕೆಯಿಂದ ಬ್ಯಾಡ್ಜ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ನವಜೀವನ ಸಮಿತಿ ಪೋಷಕರು, ನವಜೀವನ ಸಮಿತಿ ಸದಸ್ಯರು ಮತ್ತು ನವಜೀವನ ಸದಸ್ಯರ ಕುಟುಂಬಸ್ಥರು ಉಪಸ್ಥಿತರಿದ್ದರು.