ಉಡುಪಿ ಪ್ರಾದೇಶಿಕ ವಿಭಾಗದ ಕಾಪು ತಾಲೂಕು ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ದಯಾನಂದ ಹೆಜಮಾಡಿರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ಅಮೀನ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಗೀತಾಂಜಲಿ ಸುವರ್ಣ, ಶ್ರೀ ಉದಯ್ ಕುಮಾರ್ ಶೆಟ್ಟಿ ಇನ್ನಾ, ವಲಯಾಧ್ಯಕ್ಷರಾದ ಸುಜಾತ ಸುವರ್ಣ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ, ಕ್ಷೇತ್ರ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಜನಜಾಗೃತಿ ವೇದಿಕೆ ಪಧಾದಿಕಾರಿಗಳು, ವಲಯದ ಮೇಲ್ವಿಚಾರಕರು ಮತ್ತು ನವಜೀವನ ಸಮಿತಿ ಪೋಷಕರು ಉಪಸ್ಥಿತರಿದ್ದರು.
