ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಅಭಿಮನ್ಯು ಕುಮಾರ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಬಾನಂಗಡ ಅರುಣ್ ಕುಮಾರ್, ಉಪಾಧ್ಯಕ್ಷರಾದ ಶ್ರೀ ಎ. ಟಿ. ರಂಗಸ್ವಾಮಿ, ಜಿಲ್ಲಾ ನಿರ್ದೇಶಕರಾದ ಶ್ರೀಮತಿ ಲೀಲಾವತಿ, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ತಾಲೂಕಿನ ಯೋಜನಾಧಿಕಾರಿಗಳು ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
