ಕೊಣಾನೂರ್ ಬಿ. ಎಸ್. ಎಸ್. ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅರಕಲಗೂಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಇದರ ಸಂಯುಕ್ತ ಆಶ್ರಯದಲ್ಲಿ ಕೊಣಾನೂರ್ ಬಿ. ಎಸ್. ಎಸ್. ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯರದ ಗೌರವಾನ್ವಿತ ಶ್ರೀ ಚೌಡೇ ಗೌಡ್ರು ರವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪ್ರಕಾಶ್ ರವರು ವಹಿಸಿ ಮಕ್ಕಳಿಗೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಕನ್ನಡ ಉಪನ್ಯಾಸಕರಾದ ಶ್ರೀಮತಿ ಯಶಸ್ವಿನಿ ರವರು ಸ್ವಾಸ್ಥ್ಯ ಸಮಾಜ ನಿರ್ಮಾಣವನ್ನು ಮಾಡುವಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚಿನ ಗಮನವನ್ನು ನೀಡಬೇಕು ಹಾಗೂ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ನಾವೆಲ್ಲರೂ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ತಂದೆ, ತಾಯಿ, ಗುರುಗಳಿಗೆ ಗೌರವ ಕೊಡಬೇಕು ಎಂದು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ಶ್ರೀಯುತ ಜಿನ್ನಪ್ಪ ರವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು, ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.