ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಹೊಳಲ್ಕೆರೆಯ ನೂತನ ಕಛೇರಿ ವಿಳಾಸ ಸೌದದಲ್ಲಿ ಜಿಲ್ಲಾ ವೇದಿಕೆಯ ಅಧ್ಯಕ್ಷರಾದ ಶ್ರೀ ಬಿ. ಪಿ. ಓಂಕಾರಪ್ಪ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 2025-26 ನೇ ಸಾಲಿನ ಕ್ರಿಯಾಯೋಜನೆ ಅನುಷ್ಠಾನ, ನವಜೀವನ ಸಮಿತಿ ಬಲವರ್ಧನೆ, ಪೋಷಕರ ತರಬೇತಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಆಯ್ಕೆ, ನವಜೀವನೋತ್ಸವ ಕಾರ್ಯಕ್ರಮ, ಆರ್ಥಿಕ ವರ್ಷದ ಮದ್ಯವರ್ಜನ ಶಿಬಿರದ ಅನುಷ್ಠಾನ, ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ನೋಂದಾವಣೆ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು ವರದಿ ಮಂಡನೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು ಮತ್ತು ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.