ಬಂಟ್ವಾಳ ತಾಲೂಕು ಮಟ್ಟದ ನವಜೀವನ ಸಮಿತಿ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸದಸ್ಯರ ಸಭೆ ಬಂಟ್ವಾಳ ತಾಲೂಕಿನ ಯೋಜನಾ ಕಚೇರಿಯಲ್ಲಿ ನಡೆಯಿತು. ಸಭೆಯನ್ನು ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿ ರವರು ಬಂಟ್ವಾಳ ತಾಲೂಕಿನಲ್ಲಿ ನವಜೀವನ ಸಮಿತಿಯನ್ನು ಸಕ್ರಿಯವಾಗಿ ಇಟ್ಟುಕೊಂಡು ಜನಜಾಗೃತಿ ವೇದಿಕೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ತಿಳಿಸಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ ರವರು ವಲಯ ಮಟ್ಟದಲ್ಲಿ ನವಜೀವನ ಸಮಿತಿ ರಚನೆ, ಮನೆ ಭೇಟಿ, ಫ್ರೀ ಕಾನ್ಫರೆನ್ಸ್ ಸಭೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀ ಪ್ರವೀಣ್, ಆಡಳಿತ ಪ್ರಬಂಧಕರಾದ ಶ್ರೀ ನಿಸಾರ್, ನವಜೀವನ ಸಮಿತಿ ಪೋಷಕರು ಮತ್ತು ನವಜೀವನ ಸಮಿತಿ ಸದಸ್ಯರು ಉಪಸ್ಥಿತರಿದ್ದರು.