ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ

Janajagurthi Vedike News

ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ನಾಗರತ್ನ ಅನಪೂರ ಮತ್ತು ಶ್ರೀ ಜಯಂತ್ ಪೂಜಾರಿ ಪ್ರಾದೇಶಿಕ ನಿರ್ದೇಶಕರು ಜಿಲ್ಲಾ ಜನಜಾಗೃತಿ ವೇದಿಕೆಯ ಗೌರವ ಸಲಹೆಗಾರರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. 2024 -25 ನೇ ಸಾಲಿನ ಕ್ರಿಯಾ ಯೋಜನೆಯನ್ನು ಪ್ರಕಾರ ಪ್ರಥಮಾ ಸಭೆಯನ್ನು ಉದ್ದೇಶಿಸಿ ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳುತ್ತಿರುವ ಬಗ್ಗೆ ಹಾಗೂ 4 ಜೆಲ್ಲೆಯ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳ ಹಾಗೂ ಸಮಿತಿಯ ಸದಸ್ಯರ ಸಹಕಾರವನ್ನು ಶ್ಲಾಘನೆ ಮಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಹಲವಾರು ಕಾರ್ಯಕ್ರಮವನ್ನು ಪೂಜ್ಯ ಹೆಗ್ಗಡೆಯವರು ಈ ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದ್ದಾರೆ ಎಂದು ನುಡಿದರು ಹಾಗೆಯೇ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ವಾತ್ಸಲ್ಯದ ಕಾರ್ಯಕ್ರಮದಲ್ಲಿ ಸಂಪೂರ್ಣ ಅಶಕ್ತ ಕುಟುಂಬ ಗುರುತಿಸಿ ವಾತ್ಸಲ್ಯದ ಮನೆಯನ್ನು ಅಮ್ಮನವರು ಒದಗಿಸುತ್ತಿರವ ಬಗ್ಗೆ ತಿಳಿಸಿದರು ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಇನ್ನಷ್ಟು ಅದ್ಬುತ ಕಾರ್ಯಕ್ರಮಗಳು ಹಮ್ಮಿಕೊಂಡು ಯಶಸ್ವಿಯಾಗಿ ನೆಡೆಸುವ ಬಗ್ಗೆ ಶುಭ ಹಾರೈಸಿದರು. ಸಭೆಯಲ್ಲಿ ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ ರವರು 2023-24 ಜನಜಾಗೃತಿ ವೇದಿಕೆಯ ಸಾಧನೆಯ ವರದಿ ಮಂಡನೆ ಮಾಡಿದರು. 2024-25 ರ ಸಾಲಿನ ಜನಜಾಗೃತಿ ವೇದಿಕೆಯ ಕ್ರಿಯಾ ಯೋಜನೆಯ ಗುರಿಯನ್ನು ಜಿಲ್ಲಾ ಸಮಿತಿ ಅಧ್ಯಕ್ಷರಾದ ಶ್ರಿಮತಿ ನಾಗರತ್ನ ಅನಪುರ ಮಂಡನೆ ಮಾಡಿದರು. ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು
ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.