ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ 1805 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಡಾ|ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಶ್ರೀ ಶ್ರೀ ಶ್ರೀ ಡಾ| ಮುಮ್ಮಡಿ ನಿರ್ವಾಣ ಮಹಾಸ್ವಾಮಿಯವರ ಕೃಪಾಶೀರ್ವಾದಗಳೊಂದಿಗೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕನಕಪುರ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕನಕಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ರಾಮನಗರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರುಗಳ ಮಾರ್ಗದರ್ಶನದೊಂದಿಗೆ,
ಶ್ರೀ ದೇಗುಲ ಮಠ ಕನಕಪುರ, ಪೊಲೀಸ್ ಇಲಾಖೆ ಮತ್ತು ತಾಲೂಕು ಆರೋಗ್ಯ ಕೇಂದ್ರ ಕನಕಪುರ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಸ್ಥಳೀಯ ಸಂಘ ಸಂಸ್ಥೆಗಳ ಮತ್ತು ದಾನಿಗಳ ಸಹಕಾರದೊಂದಿಗೆ 1805 ನೇ ಮದ್ಯವರ್ಜನ ಶಿಬಿರ ಶ್ರೀ ದೇಗುಲ ಮಠ ಕನಕಪುರದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಹರೀಶ್ ಕುಮಾರ್ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ ಇವರು ನೆರವೇರಿಸಿ ಉದ್ಘಾಟಕರ ಮಾತುಗಳನ್ನಾಡಿದರು. ಶ್ರೀ ವಿ. ರಾಮಯ್ಯ ಅಧ್ಯಕ್ಷರು 1805 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕನಕಪುರ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ಶುಭವನ್ನು ಕೋರಿದರು. ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜಯಕರ ಶೆಟ್ಟಿ ಮಾನ್ಯ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ರಾಮನಗರ ಜಿಲ್ಲೆ ಇವರು ಮಾತನಾಡಿ ಸಂಸ್ಥೆಯ ಹುಟ್ಟು, ಬೆಳವಣಿಗೆ, ನಡೆದು ಬಂದ ಹಾದಿ, ಅಭಿವೃದ್ಧಿಯ ಪಥ ಮತ್ತು ಸಾಧನೆಯ ಪರಿಚಯದೊಂದಿಗೆ ಶುಭಾಶಯವನ್ನು ಕೋರಿದರು.
ಡಾ. ಶಶಿಧರ್ ವೈದ್ಯಾಧಿಕಾರಿಗಳು ಕನಕಪುರ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ವೆಂಕಟಪ್ಪ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ರಾಮನಗರ ಜಿಲ್ಲೆ, ಕುಮಾರಿ ರಂಜಿತ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಶ್ರೀಮತಿ ಪುಷ್ಪಲತಾ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮೇಗಳಬೀದಿ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಮತ್ತು ನವಜೀವನ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.