ಸುಳ್ಯದಲ್ಲಿ 1812 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸುಳ್ಯ ತಾಲೂಕು ಬೆಳ್ಳಾರೆ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ತಾಲೂಕು ಜನಜಾಗೃತಿ ವೇದಿಕೆ ಸುಳ್ಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಜಸ್ಟೀಸ್ ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಇವರುಗಳ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ, ನವಜೀವನ ಸಮಿತಿಗಳು ಸುಳ್ಯ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳ ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ 1812 ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನ ಬೆಳ್ಳಾರೆಯಲ್ಲಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಅಣ್ಣಾ ವಿನಯಚಂದ್ರ ಮಾಜಿ ವಿಧಾನ ಪರಿಷತ್ ಸದಸ್ಯರು ಇವರು ನೆರವೇರಿಸಿ ಉದ್ಘಾಟಕರ ಮಾತುಗಳನ್ನಾಡಿದರು. ಶ್ರೀ ಲೋಕನಾಥ ಅಮೆಚೂರು ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಮಾತುಗಳೊಂದಿಗೆ ಶುಭವನ್ನು ಕೋರಿದರು. ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಪ್ರವೀಣ್ ಕುಮಾರ್ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ದಕ್ಷಿಣ ಕನ್ನಡ ಜಿಲ್ಲೆ – 2 ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಮದ್ಯಪಾನವೆಂಬುದೊಂದು ಸಮಾಜವನ್ನು ಬಾದಿಸುವ ಮತ್ತು ಜಾಗೃತೆ ತಪ್ಪಿದರೆ ಯಾರನ್ನೂ ಬಿಡದ ಖಾಯಿಲೆ. ಮದ್ಯಪಾನಕ್ಕೆ ಜಾತಿ, ಧರ್ಮ, ಪಕ್ಷ, ಭೇದ ಯಾವುದೂ ಇರುವುದಿಲ್ಲ. ಹಾಗಾಗಿ ಇದೊಂದು ಸರ್ವಧರ್ಮ ಕಾರ್ಯಕ್ರಮ. ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿಯ ಅತ್ಯುತ್ತಮ ಸಹಕಾರವನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಎನ್.ಎ. ರಾಮಚಂದ್ರ ನಿಕಟ ಪೂರ್ವ ಜಿಲ್ಲಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ, ಶ್ರೀ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬೆಳ್ಳಾರೆ ಮತ್ತು ಗೌರವಾಧ್ಯಕ್ಷರು 1812 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ಳಾರೆ, ಶ್ರೀಮತಿ ರಾಜೀವಿ ಆರ್. ರೈ ಅಧ್ಯಕ್ಷರು 1812 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಬೆಳ್ಳಾರೆ, ಶ್ರೀ ನಿತ್ಯಾನಂದ ಮುಂಡೋಡಿ ಮಾಜಿ ಅಧ್ಯಕ್ಷರು ವ್ಯವಸ್ಥಾಪನಾ ಸಮಿತಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶ್ರೀ ಎಸ್.ಎನ್. ಮನ್ಮಥ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಅಧ್ಯಕ್ಷರು PACS ಐವರ್ನಾಡು, ಶ್ರೀ ಗೋಪಾಲಕೃಷ್ಣ ನಾಯಕ್ ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಗೌರಿಪುರಂ, ಶ್ರೀಮತಿ ನಮಿತಾ ಎಲ್. ರೈ ಅಧ್ಯಕ್ಷರು ಗ್ರಾಮ ಪಂಚಾಯತ್ ಬೆಳ್ಳಾರೆ, ಶ್ರೀ ಶ್ರೀರಾಮ್ ಪಾಟಾಜೆ ಅಧ್ಯಕ್ಷರು PACS ಬೆಳ್ಳಾರೆ, ಶ್ರೀ ಮಾಧವ ಗೌಡ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಶ್ರೀ ಆನಂದ ಗೌಡ ಪೆರಿಯಾಣ ವಲಯಾಧ್ಯಕ್ಷರು ಜನಜಾಗೃತಿ ವೇದಿಕೆ ಬೆಳ್ಳಾರೆ ವಲಯ, ಶ್ರೀಮತಿ ವೇದ ಹೆಚ್. ಶೆಟ್ಟಿ ವಲಯಾಧ್ಯಕ್ಷರು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯ, ಶ್ರೀಮತಿ ನಂದಿನಿ ಉಪಾಧ್ಯಕ್ಷರು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ಒಕ್ಕೂಟ ಇವರುಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು. ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಶ್ರೀಮತಿ ವಿಶಾಲ ಕೆ. ಜೊತೆ ಕಾರ್ಯದರ್ಶಿ/ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೆಳ್ಳಾರೆ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಮತ್ತು ನವಜೀವನ ಸಮಿತಿ ಸದಸ್ಯರುಗಳು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.