ಹೊನ್ನಾವರ ತಾಲೂಕಿನಲ್ಲಿ 1920 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹೊನ್ನಾವರ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಹೊನ್ನಾವರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಉತ್ತರ ಕನ್ನಡ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹೊನ್ನಾವರ ತಾಲೂಕು, ಪಟ್ಟಣ ಪಂಚಾಯತ್ ಹೊನ್ನಾವರ, ಸರ್ಕಾರಿ ಆಸ್ಪತ್ರೆ ಹೊನ್ನಾವರ, ಆರಕ್ಷಕ ಠಾಣೆ ಹೊನ್ನಾವರ, ನವಜೀವನ ಸಮಿತಿ ಹೊನ್ನಾವರ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹೊನ್ನಾವರ ತಾಲೂಕು, ಸ್ಥಳೀಯ ಸಂಘ ಸಂಸ್ಥೆಗಳು ಮತ್ತು ಊರಿನ ದಾನಿಗಳ ಸಹಕಾರದೊಂದಿಗೆ ಪರಮಪೂಜ್ಯ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ 1920 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ M. P. E ಸೊಸೈಟಿ ಸೆಂಟ್ರಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸಿದ್ದರಾಮೇಶ್ವರ ಎಸ್. ಪೋಲಿಸ್ ಇನ್ಸ್ಪೆಕ್ಟರ್ ಹೊನ್ನಾವರ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿ ಶುಭ ಹಾರೈಸಿದರು. ಶ್ರೀ ಕೃಷ್ಣಮೂರ್ತಿ ಭಟ್, ಅಧ್ಯಕ್ಷರು MPE ಸೊಸೈಟಿ ಹೊನ್ನಾವರ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಉಡುಪಿ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ನಾಗರಾಜ್ ಪಿ. ಭಟ್, ಅಧ್ಯಕ್ಷರು ಪಟ್ಟಣ ಪಂಚಾಯತಿ ಹೊನ್ನಾವರ ಇವರು ಮಾತನಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಮದ್ಯವರ್ಜನ ಶಿಬಿರದಿಂದ ಸಾವಿರಾರು ಕುಟುಂಬಗಳ ಕಣ್ಣೀರನ್ನು ಒರೆಸಿ ಅವರ ಬದುಕಿಗೆ ಬೆಳಕನ್ನು ತೋರಿಸುವ ಕೆಲಸ ಮಾಡುತ್ತಿದೆ ಎಂದರು. ಶ್ರೀ ಎಸ್. ಜಿ. ಭಟ್ ವಿಶ್ರಾಂತ ಪ್ರಾಂಶುಪಾಲರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರು ಇವರು ಮಾತನಾಡಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮೂಲಕ ಕರ್ನಾಟಕ ರಾಜ್ಯಾದ್ಯಂತ ದುಶ್ಚಟಮುಕ್ತ ಸಮಾಜ ನಿರ್ಮಾಣದ ಕೈಂಕರ್ಯ ನಡೆಯುತ್ತಿದೆ. ಅದರಲ್ಲೂ ಬಹು ನಿರೀಕ್ಷಿತ ಕಾರ್ಯಕ್ರಮ ಮದ್ಯವರ್ಜನ ಶಿಬಿರ. ಶಿಬಿರದ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಡಾ|| ರಾಜೇಶ್ ಕಿಣಿ ರವರು ಮಾತನ್ನಾಡುತ್ತಾ ಮದ್ಯಪಾನದಿಂದ ಮನೆ ಸ್ಥಿತಿ ಮತ್ತು ಮನಸ್ಥಿತಿ ಹಾಳಾಗುತ್ತದೆ. ಇಂತಹ ಮದ್ಯವರ್ಜನ ಶಿಬಿರದಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ ಎಂದರು. ಉತ್ತರ ಕನ್ನಡ ಜಿಲ್ಲಾ ನಿರ್ದೇಶಕರಾದ ಶ್ರೀ ಮಹೇಶ್ ಎಂ. ಡಿ. ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯವಾದದು ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಪ್ರಾಂಶುಪಾಲರು ಸೆಂಟ್ರಲ್ ಸ್ಕೂಲ್ ಹೊನ್ನಾವರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಕೃಷ್ಣ ಟಿ. ಗೌಡ ಮಾವಿನಕುರ್ವೆ, ಶ್ರೀಮತಿ ಮೇಧಾ ನಾಯ್ಕ ಒಕ್ಕೂಟದ ಅಧ್ಯಕ್ಷರು, ಶ್ರೀ ಸುರೇಶ್ ಹೊನ್ನಾವರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಕುಮಾರ್ ಟಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಫೀಲೋಮಿನಾ ಡಿ’ಸೋಜ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ನಿತೇಶ್ ಕೆ. ಮೇಲ್ವಿಚಾರಕರು ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗ ಇವರುಗಳು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಹೊನ್ನಾವರ ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು/ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು, ಶೌರ್ಯ ಸ್ವಯಂಸೇವಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.