241 ನೇ ವಿಶೇಷ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ “ಜಾಗೃತಿಸೌಧ” ದಲ್ಲಿ 241 ನೇ ವಿಶೇಷ ಮದ್ಯವರ್ಜನ ಶಿಬಿರ ಉದ್ಘಾಟನೆಗೊಂಡಿತು. ಶಿಬಿರದ ಪ್ರಾಸ್ತಾವಿಕವನ್ನು ಆಡಳಿತಾತ್ಮಕ ಯೋಜನಾಧಿಕಾರಿಯವರಾದ ಶ್ರೀ ಮಾಧವ ಗೌಡ ರವರು ಪ್ರಾಸ್ತಾವಿಸಿದರು ಮತ್ತು ಎಲ್ಲರನ್ನೂ ಸ್ವಾಗತಿಸಿದರು. ಶಿಬಿರದ ಉದ್ಘಾಟನೆಯನ್ನು ವೈದ್ಯರಾದ ಡಾ. ಮೋಹನ್ ದಾಸ್ ಗೌಡ ರವರು ದೀಪ ಬೆಳಗಿಸುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಬಂಧಕರಾದ ಶ್ರೀ ಕಿಶೋರ್ ಕುಮಾರ್, ಶಿಬಿರಾಧಿಕಾರಿಗಳು, ಆಪ್ತ ಸಮಾಲೋಚಕರು, ಆರೋಗ್ಯ ಕಾರ್ಯಕರ್ತರು, ನವಜೀವನ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಮತ್ತು ಅವರ ಕುಟುಂಬದರು ಉಪಸ್ಥಿತರಿದ್ದರು.