ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ತುಮಕೂರು-1 ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ತುಮಕೂರು-1 ಜಿಲ್ಲೆ ಸಹಯೋಗದೊಂದಿಗೆ ರಾಜರ್ಷಿ ಪದ್ಮಭೂಷಣ ಡಾ|| ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ|| ಹೇಮಾವತಿ ವಿ. ಹೆಗ್ಗಡೆಯವರ ಕೃಪಾಷೀರ್ವಾದ ಹಾಗೂ ಮಾರ್ಗದರ್ಶನಗಳೊಂದಿಗೆ ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ತುಮಕೂರು ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಸುವರ್ಣ ರವರು ಮುಂದಿನ ಆರ್ಥಿಕ ವರದಿ ವರ್ಷದಲ್ಲಿ ಎಲ್ಲಾ ತಾಲೂಕುಗಳಲ್ಲಿ ಜನಜಾಗೃತಿ ವೇದಿಕೆಯ ಪದಾದಿಕಾರಿಗಳ ಸಹಕಾರವನ್ನು ಪಡೆದು ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳನ್ನು ಬಹಳಷ್ಟು ಪರಿಣಾಮಕಾರಿಯಾಗಿ ಅನುಷ್ಠಾನವನ್ನು ಮಾಡುವುದಾಗಿ ತಿಳಿಸಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿನ್ನು ನೀಡಿದರು. ಗತಸಭೆಯ ವರದಿಯನ್ನು ಕುಣಿಗಲ್ ಯೋಜನಾಧಿಕಾರಿ ಶ್ರೀ ಸತೀಶ್ ಶೇಟ್ ರವರು ಮಂಡಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಶ್ರೀ ತಿಮ್ಮಯ್ಯ ನಾಯ್ಕ ರವರು 2024-25 ನೇ ಸಾಲಿನ ವರದಿ ವರ್ಷದ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಬಾಕಿ ಉಳಿದ ಕಾರ್ಯಕ್ರಮಗಳ ಕುರಿತು ವಿಮರ್ಶೆ, ಮುಂದಿನ ವರ್ಷದ ಕ್ರಿಯಾಯೋಜನೆಯ ಕಾರ್ಯಕ್ರಮಗಳು, ಪದಾಧಿಕಾರಿಗಳು ಯೋಜನೆಯ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಕುರಿತು, ವಲಯಕ್ಕೊಂದು ನವಜೀವನ ಸಮಿತಿಗಳ ರಚನೆ ಮತ್ತು ಅನುಪಾಲನೆ, ಜನಜಾಗೃತಿ ಸದಸ್ಯರ ಸಂಪೂರ್ಣ ಸುರಕ್ಷಾ, ಮುಂದಿನ ದಿನಗಳಲ್ಲಿ ಜನಜಾಗೃತಿ ವೇದಿಕೆಯ ಎಲ್ಲಾ ಕಾರ್ಯಕ್ರಮಗಳನ್ನು ಏಪ್ರಿಲ್ ತಿಂಗಳಿನಿಂದಲೇ ನಡೆಸುವ ಬಗ್ಗೆ ತಿಳಿಸಿ ಮಾಹಿತಿಯನ್ನು ನೀಡಿದರು. ತುಮಕೂರು -1 ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷರು, ಉಪಾಧ್ಯಕ್ಷರು ಮತ್ತು ವೇದಿಕೆಯ ಸದಸ್ಯರುಗಳು ಹಲವಾರು ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸುವ ಮೂಲಕ ಆರೋಗ್ಯಕರ ಚರ್ಚೆಯಲ್ಲಿ ಭಾಗವಹಿಸಿ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ತುಮಕೂರು-1 ಜಿಲ್ಲೆಯ ಆಡಿಟ್ ಪ್ರಬಂಧಕರಾದ ಶ್ರೀ ರಾಜೇಶ್ ರವರು ಆರ್ಥಿಕ ವರ್ಷದ ಜನಜಾಗೃತಿ ವೇದಿಕೆ ಬ್ಯಾಂಕ್ ಖಾತೆಯ ಖರ್ಚು ಮತ್ತು ಉಳಿತಾಯದ ವರದಿಯನ್ನು ಮಂಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷರಾದ ಶ್ರೀ ನಟರಾಜ್ ಬಾದಾಮಿ ರವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕರ್ತರುಗಳೊಂದಿಗೆ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಎಲ್ಲಾ ಸಂಧರ್ಭಗಳಲ್ಲಿಯೂ ಸಹ ಜೊತೆಯಾಗಿ ನಿಲ್ಲುವ ಮೂಲಕ ಸ್ಥಳಿಯ ಸಮಸ್ಯೆಗಳ ನಿವಾರಣೆಯನ್ನು ಮಾಡುವಂತಹ ವ್ಯಕ್ತಿಗಳಾಗಿ ನಾವು ಪೂಜ್ಯರ ಕಾರ್ಯಕ್ರಮಗಳನ್ನು ಸ್ಥಳಿಯ ಮಟ್ಟದಲ್ಲಿ ಅನುಷ್ಟಾನವನ್ನು ಮಾಡಬೇಕೆಂದು ತಿಳಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಆದ್ದರಿಂದ ಯೋಜನೆಯ ಎಲ್ಲಾ ಕಾರ್ಯಕ್ರಮಗಳಲ್ಲಿ ತಾವುಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು. ಪೂಜ್ಯರ ಮತ್ತು ಮಾತೃರ್ಷಿ ಅಮ್ಮನವರ ಆಶೀರ್ವಾದದಿಂದ ಮತ್ತು ಟ್ರಸ್ಟಿಗಳ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಜನಜಾಗೃತಿ ವೇದಿಕೆಯನ್ನು ಸಂಘಟಿಸುವಂತಹ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿ ಮಾಹಿತಿಯನ್ನು ನೀಡಿದರು. ಸಭೆಯ ಅಧ್ಯಕ್ಷತೆಯನ್ನು ತುಮಕೂರು-1 ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ಶ್ರೀ ಅಮರನಾಥ್ ಶೆಟ್ಟಿ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಸಭೆಯಲ್ಲಿ ಎಂ.ಐ.ಎಸ್ ಯೋಜನಾಧಿಕಾರಿ ಶ್ರೀ ಸುರೇಶ್ ಶೆಟ್ಟಿ, ತಿಪಟೂರು ನಗರ ಯೋಜನಾಧಿಕಾರಿ ಶ್ರೀ ಉದಯ್, ಗುಬ್ಬಿ ಯೋಜನಾಧಿಕಾರಿ ಶ್ರೀ ರಾಜೇಶ್, ತುಮಕೂರು ಗ್ರಾಮಾಂತರ ಯೋಜನಾಧಿಕಾರಿ ಶ್ರೀ ಸಂದೇಶ್, ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕ ಶ್ರೀ ಎಂ. ಎಸ್. ದರ್ಶನ್ ಮತ್ತು ತುಮಕೂರು-1 ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳು ಉಪಸ್ಥಿತರಿದ್ದರು.