ಶಿರಾ ನಗರದ ಶ್ರೀ ವಿದ್ಯಾ ಗಣಪತಿ ಕಲ್ಯಾಣ ಮಂಟಪದಲ್ಲಿ 1860 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಶಿರಾ 2 ತಾಲೂಕು ತುಮಕೂರು 2 ಜಿಲ್ಲೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.)ಬೆಳ್ತಂಗಡಿ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಶಿರಾ ವಲಯ, ನವಜೀವನ ಸಮಿತಿಗಳು ಶಿರಾ ತಾಲ್ಲೂಕು, ಸ್ಥಳೀಯ ಸಂಘ ಸಂಸ್ಥೆಗಳ ಧಾನಿಗಳ ಸಹಕಾರದೊಂದಿಗೆ ಜರುಗುವ 1860 ನೇ ಮದ್ಯವರ್ಜನ ಶಿಬಿರದ ಉದ್ಘಾಟನೆಯು ಶಿರಾ ನಗರದ ಶ್ರೀ ವಿದ್ಯಾ ಗಣಪತಿ ಕಲ್ಯಾಣ ಮಂಟಪದಲ್ಲಿ ನೆರವೇರಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ ಹಾಗೂ ಜನಜಾಗೃತಿ ವೇದಿಕೆಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ಸವಿಸ್ತಾರವಾಗಿ ತಿಳಿಸುವ ಮೂಲಕ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಶ್ರೀ ತಿಮ್ಮಯ್ಯನಾಯ್ಕ ರವರು ಪ್ರಾಸ್ತಾವಿಕ ನುಡಿಗಳನ್ನು ನುಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಾ ತಾಲೂಕಿನ ನಿಕಟಪೂರ್ವ ಶಾಸಕರಾದ ಶ್ರೀ ರಾಜೇಶ್ ಗೌಡ ರವರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈಗೊಂಡಂತಹ ಸಮಾಜಮುಖಿ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಉದ್ಘಾಟಕರ ನುಡಿಗಳನ್ನು ನುಡಿದರು. ತುಮಕೂರು 2 ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಶ್ರೀಯುತ ದಿನೇಶ್ ಡಿ. ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲ್ಪಟ್ಟ ಕಾರ್ಯಕ್ರಮಗಳು ಹಾಗೂ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಮೂಲಕ ಮುಖ್ಯ ಅತಿಥಿಗಳ ನುಡಿಗಳನ್ನು ನುಡಿದರು. ಶ್ರೀ ದೇವರಾಜು ತಾವರೆಕೆರೆ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ತುಮಕೂರು-2, ಶ್ರೀಮತಿ ಶೋಭಾ ನಾಗರಾಜು ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು 2, ಜೈ ಪಾಲ್ ರವರು ಅಧ್ಯಕ್ಷರು ತಾಲೂಕು ಪತ್ರಕರ್ತರ ಸಂಘ ಶಿರಾ ರವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ನುಡಿಗಳನ್ನು ನುಡಿದರು. 1860 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಹೆಚ್. ಜಿ. ಬಸವರಾಜ್ ನಿವೃತ್ತ ಮುಖ್ಯ ಶಿಕ್ಷಕರು ಬೋರಸಂದ್ರ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಶ್ರೀ ಕುಮಾರ್ ಶಿಬಿರಾಧಿಕಾರಿ, ಶ್ರೀಮತಿ ಸೌಮ್ಯ ಆರೋಗ್ಯ ಸಹಾಯಕಿ, ಶ್ರೀ ದರ್ಶನ್ ಎಂ. ಎಸ್. ಮೇಲ್ವಿಚಾರಕ ಜನಜಾಗೃತಿ ವಿಭಾಗ ಪ್ರಾದೇಶಿಕ ಕಚೇರಿ ಬೆಂಗಳೂರು, ಶಿರಾ 2 ಯೋಜನಾ ಕಛೇರಿ ವ್ಯಾಪ್ತಿಯ ಕೃಷಿ ಮೇಲ್ವಿಚಾರಕ, ಕಛೇರಿ ಲೆಕ್ಕಪರಿಶೋಧಕ, ಶುದ್ಧಗಂಗಾ ಘಟಕಗಳ ಮೇಲ್ವಿಚಾರಕ, ಶಿರಾ ವಲಯದ ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.