ಚನ್ನರಾಯಪಟ್ಟಣ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಹಾಗೂ ನವಜೀವನೋತ್ಸವ ಕಾರ್ಯಕ್ರಮ

Janajagurthi Vedike News

ಮೈಸೂರು ಪ್ರಾದೇಶಿಕ ವಿಭಾಗದ ಚನ್ನರಾಯಪಟ್ಟಣ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಪದಗ್ರಹಣ, ನವಜೀವನೋತ್ಸವ ಮತ್ತು ನವಜೀವನ ಸಮಿತಿಯ ಸದಸ್ಯರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಚನ್ನರಾಯಪಟ್ಟಣ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮಾನ್ಯ ಶ್ರೀ ಜಯರಾಮ್ ಗೌಡ್ರು ತೋಟಿ, ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾನ್ಯ ಶ್ರೀ ಮಲ್ಲಿಕಾರ್ಜುನ್ ಮತ್ತು ಗೌರವಾನ್ವಿತ ಪ್ರಾದೇಶಿಕ ನಿರ್ದೇಶಕರಾದ ಜಯರಾಮ ನೆಲ್ಲಿತ್ತಾಯ ರವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಎಲ್ಲಾ ಪದಾಧಿಕಾರಿಗಳು, ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕರಾದ ಶ್ರೀ ಕೇಶವ ದೇವಾಂಗ, ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ತಿಲಕ್, ಮೈಸೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ, ಮೈಸೂರು ಪ್ರಾದೇಶಿಕ ವಿಭಾಗದ ಮೇಲ್ವಿಚಾರಕರು, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿಯ ಸದಸ್ಯರು ಮತ್ತು ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.