ಕಲಬುರಗಿ ಪ್ರಾದೇಶಿಕ ವಿಭಾಗದ ಯಾದಗಿರಿ ಜಿಲ್ಲಾ ಜನಜಾಗೃತಿ ವೇದಿಕೆ ಸಭೆ ಜಿಲ್ಲಾಧ್ಯಕ್ಷರಾದ ಶ್ರೀ ನಾಗರತ್ನ ಅನುಪುರ್ ,ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷರಾದ ಶ್ರೀ ತುಳುಜಾರಾಮ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಕಮಲಾಕ್ಷ ಮತ್ತು ಕೋಶಾಧಿಕಾರಿ ಶ್ರೀ ಸುಗುರೇಶ್ ವಾರದ ರವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ 2024-25 ನೇ ಆರ್ಥಿಕ ವರ್ಷದ ಸಾಧನೆಯ ವಿಮರ್ಶೆ, ಸಮಗ್ರ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ತಾಲೂಕುವಾರು ವರದಿ ಮಂಡನೆ, ನವಜೀವನ ಸಮಿತಿಯ ಪ್ರಗತಿಯ ಅವಲೋಕನ, ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು ಮತ್ತು ಕೋ ಅಫ್ಟ್ ಸದಸ್ಯರ ಬಗ್ಗೆ, ನವಜೀವನೋತ್ಸವ ಕಾರ್ಯಕ್ರಮ, ಜಿಲ್ಲಾ ಜನಜಾಗೃತಿ ವೇದಿಕೆಯ ಲೆಕ್ಕಾಚಾರ ಮತ್ತು ಆಂತರಿಕ ಲೆಕ್ಕ ಪರಿಶೋಧನೆ, 2025-26 ನೇ ಆರ್ಥಿಕ ವರ್ಷದ ಮದ್ಯವರ್ಜನ ಶಿಬಿರದ ಅನುಷ್ಠಾನ, ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ನೋಂದಾವಣೆ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಪದಾಧಿಕಾರಿಗಳು, ಕ್ಷೇತ್ರ ಯೋಜನಾಧಿಕಾರಿಗಳು ಮತ್ತು ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
