ಕಾರ್ಕಳ ತಾಲೂಕಿನ ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಗಾಂಧೀ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ, ಕಾರ್ಕಳ ತಾಲೂಕು, ಅಖಿಲ ಕರ್ನಾಟಕ ಜನತೆ ವೇದಿಕೆ ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ “ಗಾಂಧೀ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ” ಕಾರ್ಕಳ ತಾಲೂಕಿನ ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ನಾವು ಜೀವನ ಸಮಿತಿಯವರ ಬೈಕ್ ಜಾಥಾ ವನ್ನು ಉಡುಪಿ ಜಿಲ್ಲೆ ಯೋಜನಾ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭು ಉದ್ಘಾಟಿಸಿರುತ್ತಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ತಾಲೂಕು ಜನಜಾಗತಿ ವೇದಿಕೆ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಚೌಟ ವಹಿಸಿಕೊಂಡಿದ್ದು, ಸದಾ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪ್ರೇಮ ಕುಮಾರ್ ಮಾಡಿರುತ್ತಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ನ್ಯಾಯವಾದಿಗಳು ರಾಜ್ಯೋತ್ಸವ ಪ್ರಶಸ್ತಿ ವಿಜೇತರು ವಾದ ಎಂ ಕೆ ವಿಜಯ್ ಕುಮಾರ್, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿಗಳಾದ ಶ್ರೀ ಮೋಹನ್ ಪಡಿವಾಲ್, ಕಾ ಬಿಟ್ಟು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಅಬ್ದುಲ್ ಆರೀಶ್, ಉಪಸ್ಥಿತರಿದ್ದು ಶುಭ ಹಾರೈಸಿರುತ್ತಾರೆ. ಸಂಪನ್ಮೂಲ ವ್ಯಕ್ತಿಯಾಗಿ ದಿವಾಕರ ಪೂಜಾರಿ ಮಾತನಾಡಿದ್ದು, ಸ್ವಾಗತ ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಯೋಜನಾಧಿಕಾರಿಗಳಾದ ಭಾಸ್ಕರ್ ಸರ್, ಧನ್ಯವಾದ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಪ್ರಸಾದ್ ಮಾಡಿರುತ್ತಾರೆ.