ಗಾಂಧೀಜಿ ಕನಸಿನ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು- ಶ್ರೀ ಗುರುಪ್ರಸಾದ್ ವಿ.ಎಂ ಸರ್ಕಲ್ ಇನ್ಸ್ಪೆಕ್ಟರ್ ಕುಣಿಗಲ್ ಅಭಿಮತ.

Janajagurthi Vedike News

ಕುಣಿಗಲ್ : ಬೆಂಗಳೂರು ಪ್ರಾದೇಶಿಕ ವಿಭಾಗದ ಕುಣಿಗಲ್ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜಾಗೃತಿ ವೇದಿಕೆ ವತಿಯಿಂದ 153 ನೇಯ ಗಾಂಧಿ ಜಯಂತಿ, ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ ಕಾರ್ಯಕ್ರಮವು ತಾಲೂಕಿನ ಕೊಲ್ಲಾಪುರದಮ್ಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕುಣಿಗಲ್ ಸರ್ಕಲ್ ಇನ್ಸ್ಪೆಕ್ಟರ್ ಆದ ಶ್ರೀ ಗುರುಪ್ರಸಾದ್ ವಿ.ಎಂ ರವರು ಉದ್ಘಾಟಿಸಿ “ಗಾಂಧೀಜಿ ಕನಸಿನ ರಾಮರಾಜ್ಯದ ಕನಸನ್ನು ನನಸು ಮಾಡುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು” ಎಂದು ಶ್ಲಾಘನೀಯ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧ್ಯವರ್ಜನ ಶಿಬಿರ ಕಗ್ಗೆರೆ ಇದರ ಅಧ್ಯಕ್ಷರಾದ ಕೆ. ವಿ. ನಾಗರಾಜರವರು ವಹಿಸಿದ್ದರು. ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರು ಕೈಜೋಡಿಸಬೇಕು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ದೇಶದ ಸಂಪತ್ತಾಗಿರುವ ಮಕ್ಕಳಿಗೆ ಉತ್ತಮ ಸಂಸ್ಕಾರ ಸಂಸ್ಕೃತಿಯನ್ನು ಪೋಷಕರು ಕಳಿಸಿಕೊಟ್ಟಲ್ಲಿ ನಮ್ಮ ದೇಶ ಸದೃಢ ರಾಷ್ಟ್ರವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ವೆಂದು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನೆಯನ್ನು ಮತ್ತು ಪ್ರೇರಣೆ ನೀಡುವ ಮಾಹಿತಿಯನ್ನು ಜನಜಾಗೃತಿ ವೇದಿಕೆ ಬೆಂಗಳೂರು ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ರವರು ನೀಡಿದರು. ಮುಖ್ಯ ಅತಿಥಿಗಳಾಗಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕುಣಿಗಲ್ ಇದರ ಪ್ರಾಂಶುಪಾಲರಾದ ಡಿ. ಕೃಷ್ಣ ರವರು, ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ರವೀಂದ್ರ ಕುಮಾರ್ ರವರು, ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮೋಹನ್ ರವರು ಪ್ರಾಸ್ತಾವಿಕ ಮಾತುಗಳ ಜೊತೆಗೆ ಎಲ್ಲರನ್ನು ಸ್ವಾಗತಿಸಿದರು. ಮೇಲ್ವಿಚಾರಕರಾದ ಸೋಹನ್ ರವರು ಧನ್ಯವಾದವಿತ್ತರು, ರಮೇಶ್ ರವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯೋಜನೆ ಕಾರ್ಯಕರ್ತರು,ನವ ಜೀವನ ಪೋಷಕರು, ನವಜೀವನ ಸಮಿತಿ ಸದಸ್ಯರು ಅವರ ಕುಟುಂಬಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಾನಮುಕ್ತರಾದ ಸದಸ್ಯರಿಗೆ ಅಭಿನಂದಿಸಲಾಯಿತು.