ಚಿತ್ರದುರ್ಗ ಜಿಲ್ಲೆ ಚಿಕ್ಕಜಾಜೂರು ಯೋಜನಾ ಕಚೇರಿ ವ್ಯಾಪ್ತಿಯ ಚಿಕ್ಕಜಾಜೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಜಾಥಾ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Janajagurthi Vedike News

ಚಿತ್ರದುರ್ಗ ಜಿಲ್ಲೆ ಚಿಕ್ಕಜಾಜೂರು ಯೋಜನಾ ಕಚೇರಿ ವ್ಯಾಪ್ತಿಯ ಚಿಕ್ಕಜಾಜೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನಜಾಗೃತಿ ಜಾಥಾ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ದಲ್ಲಿ ಹೊಳಲ್ಕೆರೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಮ್. ಚಂದ್ರಪ್ಪ ರವರು ಉದ್ಘಾಟಕರಾಗಿ ಆಗಮಿಸಿ ಯೋಜನೆಯ ಕಾರ್ಯಕ್ರಮ ಗಳ ಬಗ್ಗೆ, ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮ ದಲ್ಲಿ ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಪೂಜಾರಿ , ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರು ಶ್ರೀ ಮಾರುತೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಯೋಜನಾಧಿಕಾರಿಗಳು, ಮೇಲ್ವಿಚಾರಕರು, ನವಜೀವನ ಸಮಿತಿ ಸದಸ್ಯರು, ಸೇವಾಪ್ರತಿನಿಧಿ ಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಹೊಳಲ್ಕೆರೆಯಲ್ಲಿ ಯೋಜನಾ ಕಚೇರಿ ಕಟ್ಟಡ ನಿರ್ಮಾಣ ಕ್ಕೆ ಜಾಗದ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕೆ ಶಾಸಕರನ್ನು ಸನ್ಮಾನಿಸಲಾಯಿತು. ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.