ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನೋತ್ಸವ ಕಾರ್ಯಕ್ರಮ ಆಯೋಜನೆ

Janajagurthi Vedike News

ಪರಮಪೂಜ್ಯ ರಾಜರ್ಷಿ ಡಾ॥ ಡಿ ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಕೃಪಾಶೀರ್ವಾದದೊಂದಿಗೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಹೈಸ್ಕೂಲಿನಲ್ಲಿ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕೋಡಿ ಜಿಲ್ಲೆ ಇವರ ಸಹಯೋಗದಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಹಾಗೂ ನವಜೀವನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಪಾಲ್ ಮುನವಳ್ಳಿ ಅಧ್ಯಕ್ಷರು ಜಿಲ್ಲಾ ಜನಜಾಗೃತಿ ವೇದಿಕೆ ಚಿಕ್ಕೋಡಿ ಅಧ್ಯಕ್ಷರಾಗಿ ಆಗಮಿಸಿದ ಅನಿತಾ ಚಂದು ಮದಾಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಕ್ಕೋಳ ಉದ್ಘಾಟಕರಾಗಿ ಆಗಮಿಸಿದ ಸಿದ್ದು ನಾಗಪ್ಪ ನರಾಟೆ ಜಿಲ್ಲಾ ಪಂಚಾಯತಿ ಸದಸ್ಯರು ಹಾಗೆ ತಾಲ್ಲೂಕು ಪಂಚಾಯತ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ತಾಲ್ಲೂಕಿನ ಯೋಜನಾಧಿಕಾರಿಗಳು ವಿಪತ್ತು ನಿರ್ವಹಣಾ ಪಡೆಯ ಸದಸ್ಯರು ನವಜೀವನ ಸಮಿತಿಯ ಸದಸ್ಯರು ಹಾಗೂ ತಾಲ್ಲೂಕಿನ ಮೇಲ್ವಿಚಾರಕ ದರ್ಜೆಯ ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳ ತಂಡದ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.