ಧಾರವಾಡ ಪ್ರಾದೇಶಿಕ ವಿಭಾಗದ ಚಿಕ್ಕೋಡಿ ಜಿಲ್ಲಾ ಯೋಜನಾ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನಲ್ಲಿ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ಚಿಕ್ಕೋಡಿ ಜಿಲ್ಲಾ ಯೋಜನಾ ವ್ಯಾಪ್ತಿಯ ನಿಪ್ಪಾಣಿ ತಾಲೂಕಿನಲ್ಲಿ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ನಡೆಸಲಾಗಿದ್ದು ಮಾಸಿಕ ಸಭೆಯ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ಕೃಷ್ಣ .ಟಿ ರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಶ್ರೀ ಅಣ್ಣಪ್ಪ ರುದ್ರ ಗೌಡರ್, ಶ್ರೀಮತಿ ಪುರಾಣಿಕ್ ಮಠ, ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್, ಜಾಫರ್ ಅತ್ತಾರ್, ಧಾರವಾಡ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿಗಳಾದ ನಾಗೇಶ್ ವೈ. ಎ. ಅಗ್ನಿಶಾಮಕ ದಳದ ಹತ್ತು ಮಂದಿ ಸಿಬ್ಬಂದಿ ವರ್ಗ ಹಾಗೂ ನಿಪ್ಪಾಣಿ ತಾಲೂಕಿನ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು ಮತ್ತು ಸ್ವಯಂ ಸೇವಕರು ಉಪಸ್ಥಿತರಿದ್ದರು.