ಧಾರವಾಡ ಪ್ರಾದೇಶಿಕ ವಿಭಾಗದ ದಾವಣಗೆರೆ ಜಿಲ್ಲೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಧಾರವಾಡ ಪ್ರಾದೇಶಿಕ ವಿಭಾಗದ ದಾವಣಗೆರೆ ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯನ್ನು ಇಂದು ದಾವಣಗೆರೆಯ ಜಿಲ್ಲಾ ಕಚೇರಿಯ ಸಬಾಭವದಲ್ಲಿ ನೆಡೆಸಲಾಯಿತು.ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆಗೌಡ ಜಿಲ್ಲಾ ಜನಜಾಗೃತಿ ಅಧ್ಯಕ್ಷರಾದ ಶ್ರೀ ನಾಗರಾಜ್ ಕಾಕನೂರ್, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುರೇಶ್ ಹೊಸ್ಕೆರೆ, ಕಾರ್ಯದರ್ಶಿಯಾದ ಶ್ರೀ ಜಯಂತ್ ಪೂಜಾರಿ, ಉಪಾಧ್ಯಕ್ಷರಾದ ಎಸ್ ರಾಜಶೇಖರ್ ಕೊಂಡಜ್ಜಿರವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಸಭೆಯಲ್ಲಿ ಮದ್ಯವರ್ಜನ ಶಿಬಿರದ ಅನುಷ್ಠಾನ, ಅಕ್ಟೋಬರ್.2 ಗಾಂಧಿ ಜಯಂತಿ ಕಾರ್ಯಕ್ರಮ, ನವಜೀವನ ಸಮಿತಿ ಸದಸ್ಯರಿಗೆ ಸ್ವ ಉದ್ಯೋಗ ತರಬೇತಿ, ಪಾನಮುಕ್ತ ಗ್ರಾಮ ರಚನೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅನುಷ್ಠಾನ, ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ, ಸಾಮಾಜಿಕ ಅರಣ್ಯೀಕರಣ, ಇತ್ಯಾದಿ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಜನಜಾಗೃತಿ ವಿಭಾಗದ ಯೋಜನಾಧಿಕಾರಿ,ದಾವಣಗೆರೆ ಜಿಲ್ಲೆಯ ಎಲ್ಲ ಕ್ಷೇತ್ರ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಾಮಾಜಿಕ ಅರಣ್ಯಕರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಲ್ಲಾ ಸದಸ್ಯರಿಗೆ ಹಲಸಿನ ಗಿಡ ನೀಡಿ ಗೌರವಿಸಲಾಯಿತು.