ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಹೊಸಕೋಟೆ ತಾಲೂಕಿನ ದ್ರೌಪದಮ್ಮ ದೇವಸ್ಥಾನದ ಸಮುದಾಯಭವನದಲ್ಲಿ ಜಿಲ್ಲಾಧ್ಯಕ್ಷರಾದ BK ನಾರಾಯಣಸ್ವಾಮಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ M ರವರು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಕ್ಟೋಬರ್ 2 ಗಾಂಧಿ ಜಯಂತಿ ಬಗ್ಗೆ, ನವಜೀವನ ಸಮಿತಿ ಬಲವರ್ಧನೆ ಬಗ್ಗೆ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ, ಪೋಷಕರ ತರಬೇತಿ, free conference online meeting ಬಗ್ಗೆ ವಿಶೇಷವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ರಮೇಶ್, ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ನಾಯ್ಕ, ಮತ್ತು ನೆಲಮಂಗಲ ಆನೇಕಲ್ ದೊಡ್ಡಬಳ್ಳಾಪುರ ದೇವನಹಳ್ಳಿ ಹೊಸಕೋಟೆ ತಾಲೂಕಿನ ಜಿಲ್ಲಾ ಪದಾಧಿಕಾರಿಗಳು ಹಾಗೂ ಯೋಜನಾಧಿಕಾರಿಗಳು, ಜನಜಾಗೃತಿ ಯೋಜನಾಧಿಕಾರಿ ಉಪಸ್ಥಿತರಿದ್ದರು