ಬೆಂಗಳೂರು ಪ್ರಾದೇಶಿಕ ವಿಭಾಗದ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ತಾಲೂಕಿನ ಎಲ್ಲಾ ವಲಯಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ತಾಲೂಕಿನ ಎಲ್ಲಾ ವಲಯಗಳಲ್ಲಿ ನಡೆಯುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಹುಳಿಯಾರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಶ್ರೀ ಕೃಷ್ಣಮೂರ್ತಿಯವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರಾದ ಶ್ರೀ ಶ್ಯಾಮಸುಂದರ್ ಅವರು ಮಾಹಿತಿ ನೀಡಿದರು. ಅತಿಥಿಗಳಾಗಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಮೇಲ್ವಿಚಾರಕರಾದ ಶ್ರೀಮತಿ ಚೈತ್ರ ರವರು ನಿರ್ವಹಿಸಿದರು. 650 ವಿದ್ಯಾರ್ಥಿ / ವಿದ್ಯಾರ್ಥಿನಿಯರು ಭಾಗವಹಿಸಿದ್ದರು.