ಅರಣ್ಯ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ಹಾಗೂ ಕೃಷಿ ಪ್ರಾದೇಶಿಕ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಬೆಳಾಲು-ಬೈಪಾಡಿಯ ದಡಂತಮಲೆ ರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ ಉದ್ದೇಶದಿಂದ ಅರಣ್ಯದಲ್ಲಿ ಫಲ ಸಸ್ಯಗಳ ಬೀಜ ಬಿತ್ತನೆ ಕಾರ್ಯಕ್ರಮ ನಡೆಯಿತು. ಬೀಜ ಬಿತ್ತನೆ ಮಾಡುವ ಮೂಲಕ, ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಡಾ.ಎಲ್.ಎಚ್.ಮಂಜುನಾಥ್, ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರ್ವಕ್ಷಣಾಧಿಕಾರಿಯವರಾದ ಶ್ರೀ ಪ್ರಕಾಶ್ ಎಸ್ ನೆಟಾಲ್ ಕರ್, ಡಾ.ದಿನೇಶ್ ವೈ.ಕೆ, ಉಪ ಅರಣ್ಯ ಸಂರ್ವಕ್ಷಣಾಧಿಕಾರಿಗಳು ಮಂಗಳೂರು ವಿಭಾಗ, ಶ್ರೀಮತಿ ಪರಮೇಶ್ವರಿ ಕೆ ಗೌಡ ಅಧ್ಯಕ್ಷರು, ಗ್ರಾಮ ಪಂಚಾಯತ್ ಬಂದಾರು, ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರದಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಬೀಜ ಬಿತ್ತನೆ ಮಾಡಲಾಯಿತು. ಹಣ್ಣು ಹಂಪಲುಗಳ ಗಿಡ ನಾಟಿ ಮಾಡಲಾಯಿತು. ಬೈಪಾಡಿಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು, ಎಸ್.ಡಿ.ಎಮ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು, ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಬೀಜ ಬಿತ್ತನೆ, ಗಿಡ ನಾಟಿ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.
