ಬೈಂದೂರು ತಾಲ್ಲೂಕಿನ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜನ ಜಾಗೃತಿ ಕಾರ್ಯಾಗಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ ಅಪ್ಪಣ್ಣ ಹೆಗ್ಡೆಯವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು..ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸುಧಾಕರ ಆಚಾರ್ಯರವರು ವಹಿಸಿದ್ದರು.ಬೈಂದೂರು ತಾಲೂಕಿನ ಶಾಸಕರಾದ ಶ್ರೀ ಬಿ ಎಂ ಸುಕುಮಾರ್ ಶೆಟ್ಟಿ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶುಭ ಹಾರೈಸಿದರು.ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿಯವರು ಪಾನಮುಕ್ತ ಸಾಧಕರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಸಂತ ವಸಂತ ಸಾಲ್ಯಾನ್ ರವರು…ಮಹಾತ್ಮ ಗಾಂಧೀಜಿ ಕಂಡಂತಹ ರಾಮರಾಜ್ಯದ ಕನಸನ್ನು ಪೂಜ್ಯರು ನನಸಾಗಿಸಿದ್ದಾರೆ.ಯುವ ಸಮೂಹ ಮದ್ಯಪಾನ ಮಾತ್ರವಲ್ಲದೆ ತಂಬಾಕು ಸಿಗರೇಟ್ ಗುಟ್ಕಾ ಮತ್ತು ಡ್ರಗ್ಸ್ ಮುಂತಾದ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸ್ವಾಸ್ಥ್ಯ ಸಮಾಜದ ನಿರ್ಮಾಣ ಆಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ನವೀನ್ ಅಮೀನ್,ಸಂತೋಷ್ ಭಟ್, ರಘುರಾಮ್ ಕೆ ಪೂಜಾರಿ, ಕೃಷ್ಣ ಪೂಜಾರಿ,ವಲಯ ಅಧ್ಯಕ್ಷರುಗಳು, ಸದಸ್ಯರು,ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
