ಸಮಾಜದಲ್ಲಿ ಹಲವಾರು ಅನಿಷ್ಟ ಪದ್ಧತಿಗಳಿವೆ ಅದರಲ್ಲಿ ಮಾದಕ ವಸ್ತು ಬಳಕೆ ಕೂಡ ಒಂದಾಗಿದ್ದು ಯಾರು ಅವುಗಳನ್ನು ಬಳಸುತ್ತಾರೆ ಅವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಅಂತೆ ಎಂದು ಹೊಳೆನರಸೀಪುರ ಡಿವೈಎಸ್ಪಿ ಅರುಣ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪೊಲೀಸ್ ಇಲಾಖೆ ಹೊಳೆನರಸಿಪುರ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ಮಾದಕ ವಸ್ತು ವಿರೋಧಿ ದಿನ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಯೋಜನೆಯ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ, ಮದ್ಯವರ್ಜನ ಶಿಬಿರ ಗಳ ಬಗ್ಗೆ, ಜಾಗೃತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ವೇದಿಕೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ವಿನಯ್ ,ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಚೆನ್ನೇಗೌಡ ಉಪಸ್ಥಿತರಿದ್ದರು. ನವಜೀವನ ಸದಸ್ಯರು ಹಾಗೂ ಇಲಾಖೆಯ ಸಿಬ್ಬಂದಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
