ರಾಯಚೂರಿನ ಕನ್ನಡ ಭವನದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ

Janajagurthi Vedike News

ರಾಯಚೂರಿನ ಕನ್ನಡ ಭವನದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆ ನಡೆದಿದ್ದು, ಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಭೋವಿಯವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಕೊಪ್ಪಳ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಮಾನ್ಯ ಶ್ರೀ ಗಣೇಶ್ ಬಿ ಯವರು ಕ್ರಿಯಾ ಯೋಜನೆಯ ಸಮರ್ಪಕ ಅನುಷ್ಟಾನದ ಬಗ್ಗೆ ಮಾರ್ಗದರ್ಶನ ನೀಡಿರುತ್ತಾರೆ. ವೇದಿಕೆಯಲ್ಲಿ ಬಸವರಾಜ ಪಾಟೀಲ್ ,ಮಹಮ್ಮದ್ ರಫಿ, ಸಂತೋಷ್ ಕುಮಾರ್ , ಮಾಧವ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಎಲ್ಲಾ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.