ದಕ್ಷಿಣ ಕನ್ನಡ 2 ಜಿಲ್ಲೆಯ ವಿಟ್ಲ ಯೋಜನಾ ಕಚೇರಿಯ ವ್ಯಾಪ್ತಿಯ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಶ್ರೀಧಾಮ ಮಾಣಿಲದಲ್ಲಿ ನಡೆಯುತ್ತಿರುವ ಮದ್ಯವರ್ಜನ ಶಿಬಿರದ 8 ನೇ ದಿನದ ಕುಟುಂಬ ದಿನ ಕಾರ್ಯಕ್ರಮವನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಯುತ ವಿವೇಕ್ ವಿನ್ಸೆಂಟ್ ಪಾಯಸ್ ರವರು ನಡೆಸಿಕೊಟ್ಟರು, ಈ ಸಂಧರ್ಭ ದಲ್ಲಿ ಮಾಣಿಲ ಶ್ರೀಗಳಾದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀ ಧಾಮ ಮಾಣಿಲ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ಚೆಲ್ಲಡ್ಕ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ರಾಧಾಕೃಷ್ಣ ಆಳ್ವ ಬಂಟ್ವಾಳ ಜನಜಾಗೃತಿ ಮಾಜಿ ತಾಲೂಕು ಅಧ್ಯಕ್ಷರು, ಶ್ರೀಯುತ ಚನ್ನಪ್ಪ ಗೌಡ ವಿಟ್ಲ ಯೋಜನಾಧಿಕಾರಿಗಳು, ಜನಜಾಗೃತಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಗಳಾದ ಶ್ರೀಯುತ ತಿಮ್ಮಯ್ಯ ನಾಯ್ಕ್, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು,
