ಸಾಲಿಗ್ರಾಮ ತಾಲೂಕಿನಲ್ಲಿ ನಡೆದ 1903 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

Janajagurthi Vedike News

ಮೈಸೂರು ಪ್ರಾದೇಶಿಕ ವಿಭಾಗದ ಕೆ ಆರ್ ನಗರ ಜಿಲ್ಲಾ ವ್ಯಾಪ್ತಿಯ ಸಾಲಿಗ್ರಾಮ ತಾಲೂಕಿನಲ್ಲಿ ನಡೆದ 1903 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿಕೊಂಡ ಶ್ರೀಮದ್ ಉಭಯವೇದಂತಿ ಸ್ವಾಮೀಜಿಯವರು ಶಿಬಿರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಆಶೀರ್ವಚನ ನೀಡಿದರು. ಮೈಸೂರು ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಜಯರಾಮ್ ನೆಲ್ಲಿತ್ತಾಯ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅಥಿತಿಗಳಾಗಿ ತಾಲೂಕಿನ ತಹಶೀಲ್ದಾರ್ ವಿ. ಎಸ್. ಎನ್. ನರಗುಂದ, ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಹಂದನಳ್ಳಿ ಸೋಮಶೇಖರ್, ಜಿಲ್ಲಾ ನಿರ್ದೇಶಕರಾದ ಶ್ರೀ ಮುರಳಿಧರ್, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀ ಉಮೇಶ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.