ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತಿಪಟೂರು ಗ್ರಾಮಾಂತರ ತಾಲ್ಲೋಕು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು-1 ಜಿಲ್ಲೆ ಶ್ರೀ ವಿದ್ಯಾಪೀಠ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ
ಶ್ರೀ ವಿದ್ಯಾಪೀಠ ಶಿಕ್ಷಣಸಂಸ್ಥೆಯ ಸಭಾಂಗಣದಲ್ಲಿ ವಿಶ್ವ ಮಾದಕವಸ್ತು ವಿರೋಧಿ ದಿನಾಚರಣೆಯನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.ತಿಪಟೂರು ಗ್ರಾಮಾಂತರ ತಾಲೂಕಿನ ಯೋಜನಾಧಿಕಾರಿ ಶ್ರೀ ಸರೇಶ್. ಕೆ ರವರು ಯೋಜನೆಯ ಕಾರ್ಯಕ್ರಮಗಳಬಗ್ಗೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳು ಜನತೆಯಲ್ಲಿ ದುಶ್ಚಟ ದುರಭ್ಯಾಸಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡಲು ವಿದ್ಯಾರ್ಥಿಗಳಿಗೆ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳ ಜೊತೆಗೆ ತಂಬಾಕು ವಿರೋಧಿ ಮತ್ತು ಮಾದಕ ವಸ್ತು ವಿರೋಧಿ ದಿನಗಳಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸುವ ಮೂಲಕ ಪ್ರಾಸ್ತಾವಿಕ ನುಡಿಗಳನ್ನು ನುಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿವೃತ್ತ ಶಿಕ್ಷಕರು ಹಾಗೂ ತುಮಕೂರು-1 ಜಿಲ್ಲೆಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀ ಶ್ಯಾಮಸುಂದರ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ಕಾರ್ಯಕ್ರಮಗಳು ಆಯೋಜನೆ ಮಾಡುತ್ತಾ ಬಂದಿದೆ ಅದರಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮ ಈಗಿನ ಯುವ ಪೀಳಿಗೆಗೆ ಅತ್ಯವಶ್ಯಕವಾಗಿ ಬೇಕಾಗಿರುತ್ತದೆ ಎಂದು ತಿಳಿಸಿದರು. ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು ರವರು ಮಾದಕವಸ್ತು ವಿರೋಧಿ ದಿನದ ಅರಿವು ಮೂಡಿಸುತ್ತಾ ಯುವಜನತೆಯು ದುಶ್ಚಟ ದುರಭ್ಯಾಸಗಳಿಗೆ ಅತಿ ಹೆಚ್ಚು ಬಲಿಯಾಗುತ್ತಿದ್ದು ಸಮಾಜದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತಿವೆ ಇಂತಹ ಸಮಸ್ಯೆಗಳನ್ನು ತಪ್ಪಿಸಲು ಯುವಜನತೆಗೆ ಅರಿವನ್ನು ಮೂಡಿಸುವುದು ತುಂಬಾ ಅವಶ್ಯಕತೆ ಇದೆಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಎಲ್ಲ ಯುವಜನತೆಗೆ ಅರಿವು ಮೂಡಿಸುತ್ತಿದೆ ಎಂದು ತಿಳಿಸಿದರು. ಸರಕಾರ ಮಾಡಬೇಕಾದಂತ ಕಾರ್ಯಕ್ರಗಳನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಾ ಉತ್ತಮ ಸಮಾಜ ನಿರ್ಮಾಣ ಮಾಡುತ್ತಿದೆ ಎಂದು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿದ್ಯಾಪೀಠ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರೇಣುಕಯ್ಯ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರೌಡಶಾಲಾ ವಿಭಾಗದ ವಿದ್ಯಾರ್ಥಿ/ನಿ ಯರಿಗೆ ಸ್ವಾಸ್ಥ್ಯಸಂಕಲ್ಪ ಪ್ರತಿಗ್ನೆಯನ್ನು ಭೋಧಿಸಲಾಯಿತು.ಕಾರ್ಯಕ್ರಮದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆ ಮೇಲ್ವಿಚಾರಕರಾದ ಶ್ರೀ ದರ್ಶನ್. ಎಂ. ಎಸ್ ಕರಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಹೇಮಾವತಿ ಜ್ಞಾನ ವಿಕಾಸ ಸಮಾನ್ವಯಧಿಕಾರಿ ಶ್ರೀಮತಿ ಭಾಗ್ಯಲಕ್ಷ್ಮಿ ಸೇವಾಪ್ರತಿನಿಧಿಯವರಾದ ನಸ್ರೀನ್ ವಿಜಯ ಲಕ್ಷ್ಮಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.