ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2017ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಪರಮಪೂಜ್ಯ ರಾಜರ್ಷಿ ಡಾII ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಾಲೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಲೂರು ವಲಯ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಲೂರು ವಲಯ, ನವಜೀವನ ಸಮಿತಿಗಳು ಮಾಲೂರು ತಾಲ್ಲೋಕು ಇವರ ಸಂಯುಕ್ತ ಆಶ್ರಯದಲ್ಲಿ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ 2017ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ತಿರುಮಲ ಕಲ್ಯಾಣ ಮಂಟಪ ಮಾಲೂರು ನಲ್ಲಿ ಜರುಗಿತು.ಶ್ರೀ ಸತೀಶ್. ಹೆಚ್ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮಾಲೂರು ರವರು ಸರ್ವರಿಗೂ ಸ್ವಾಗತವನ್ನು ಬಯಸಿದರು.ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಮಾತನಾಡಿ ಕಡಿಮೆ ಖರ್ಚಿನಲ್ಲಿ ಕಡಿಮೆ ಸಮಯದಲ್ಲಿ ಒಬ್ಬ ವ್ಯಕ್ತಿಯ ಅಂತರಂಗವನ್ನು ಭೇದಿಸುವ ಮೂಲಕ ಮನಃ ಪರಿವರ್ತನೆಯನ್ನು ಮಾಡುವಂತಹ ಪ್ರಕ್ರಿಯೆಯೆ ಪೂಜ್ಯರ ಮದ್ಯವರ್ಜನ ಶಿಬಿರ ಎಂದು ತಿಳಿಸುವ ಮೂಲಕ ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಆಸೀನರಾಗಿದ್ದ ಗಣ್ಯಮಾನ್ಯರು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಕಾರ್ಯಕ್ರಮದ ಉದ್ಗಾಟನೆಯನ್ನು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದ ಆಚಾರ್ಯ ಗೌರವಾನ್ವಿತ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ತುಮಕೂರು-2 ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರುವ ಮೂಲಕ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ವೇಣುಗೋಪಾಲವಹ್ನಿ ಸಾಹಿತಿಗಳು, ಶ್ರೀ ಎಂ. ವಿ. ವೇಮನ ಮಾಜಿ ಸದಸ್ಯರು ನಗರಸಭೆ ಮಾಲೂರು, ಎನ್. ಪರಮೇಶ್ ಮಾಜಿ ಸದಸ್ಯರು ನಗರಸಭೆ ಮಾಲೂರು, ಶ್ರೀ ರಾಮಸ್ವಾಮಿರೆಡ್ಡಿ ಮಾಜಿ ಜಿ. ಪಂ ಸದಸ್ಯರು, ಶ್ರೀ ಮಹೇಶ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ, ಕಲಾರ ಜಿಲ್ಲೆ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.
ಶ್ರೀ ರಾಮಮೂರ್ತಿ ಗೌರವಅಧ್ಯಕ್ಷರು 2017ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಾಲೂರು ವಲಯ, ಮಾಜಿ ಅಧ್ಯಕ್ಷರು ಪುರಸಭೆ ಮಾಲೂರು ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಕಾರ್ಯಕ್ರಮದಲ್ಲಿ ಶ್ರೀ ಕುಮಾರ್ ಶಿಬಿರಾಧಿಕಾರಿ, ಕುಮಾರಿ ರಂಜಿತ ಆರೋಗ್ಯ ಸಹಾಯಕಿ, ಶ್ರೀ ದರ್ಶನ್ ಎಂ. ಎಸ್ ಮೇಲ್ವಿಚಾರಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಇವರು ಉಪಸ್ಥಿತರಿದ್ದರು.ಮಾಲೂರು ತಾಲೂಕಿನ ಎಲ್ಲಾ ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಶ್ರೀ ರಮೇಶ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಾಲೂರು ವಲಯ ಇವರು ವಂದಿಸಿದರು.