ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ

Janajagurthi Vedike News

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ ಅ.2 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ , ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸಮಾಜ ಸೇವಕ ಆರ್.ಬಿ. ಹೆಬ್ಬಳ್ಳಿ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಎಲ್. ಹೆಚ್. ಮಂಜುನಾಥ್ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿ . ರಾಮಸ್ವಾಮಿ, ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜಿಲ್ಲಾಧ್ಯಕ್ಷ ಎನ್. ಎ ರಾಮಚಂದ್ರ, ಜಯರಾಮ ಪಾಟೀಲ್ , ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಿಸ್ ಹಾಗು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಟ್ರಸ್ಟಿಗಳು ಹಾಗು ದ.ಕ ಜಿಲ್ಲಾ ವೇದಿಕೆಯ ತಾಲೂಕು ಅಧ್ಯಕ್ಷರುಗಳಾದ ಶಾರದಾ ಆರ್ ರೈ, ವಿಶ್ವನಾಥ ರೈ ಸುಳ್ಯ, ಮಹಾಬಲ ರೈ ಪುತ್ತೂರು, ಮಹಾಬಲ ಚೌಟ ಮಂಗಳೂರು, ಜಿಲ್ಲಾ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯೋಜನಾಧಿಕಾರಿಗಳಾದ ಜಯಕರ್ ಶೆಟ್ಟಿ, ಮೋಹನ್ ಕೆ, ಯಶವಂತ್ ಮೇಲ್ವಿಚಾರಕರಾದ ತಿಮ್ಮಯ್ಯ ನಾಯ್ಕ್, ನಂದಕುಮಾರ್, ಹರೀಶ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.