ಅಜ್ಜಂಪುರದಲ್ಲಿ 1917 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಜ್ಜಂಪುರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಚಿಕ್ಕಮಗಳೂರು ಜಿಲ್ಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.)ಅಜ್ಜಂಪುರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ, ಉಜಿರೆ ಇವರುಗಳ ಸಹಯೋಗದೊಂದಿಗೆ 1917 ನೇ ಮದ್ಯವರ್ಜನ ಶಿಬಿರ ಶ್ರೀ ಬಸವೇಶ್ವರ ಸಮುದಾಯ ಭವನ ಅಜ್ಜಂಪುರದಲ್ಲಿ ಉದ್ಘಾಟನೆಗೊಂಡಿತು. ಶಿಬಿರದ ಉದ್ಘಾಟನೆಯನ್ನು ಶ್ರೀ ವೀರೇಂದ್ರ ವೃತ್ತ ನಿರೀಕ್ಷಕರು ಪೊಲೀಸ್ ಠಾಣೆ ಅಜ್ಜಂಪುರ ಇವರು ನೆರವೇರಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎ. ಟಿ. ಶ್ರೀನಿವಾಸ್ ಅಧ್ಯಕ್ಷರು ಮದ್ಯವರ್ಜನ ವ್ಯವಸ್ಥಾಪನ ಸಮಿತಿ ರವರು ವಹಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಎ. ಸಿ. ಚಂದ್ರಪ್ಪ, ಜಿಲ್ಲಾ ನಿರ್ದೇಶಕರಾದ ಶ್ರೀ ಸದಾನಂದ ಬಂಗೇರ, ಶ್ರೀಮತಿ ಗಾಯತ್ರಿ, ಶ್ರೀ ಶಿವಲಿಂಗ ಸ್ವಾಮಿ, ಶ್ರೀಮತಿ ಕವಿತಾ ಟಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.