ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ರಾಜೀವ್ ಸ್ನೇಹ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡ ಅರಣ್ಯ ಸಸಿಗಳ ನರ್ಸರಿ ಕಾರ್ಯಕ್ರಮಕ್ಕೆ ಗಿಡ ನಾಟಿ ಮಾಡಿ ಚಾಲನೆ ನೀಡಿರುವರು . ಅರಣ್ಯ ಸಸಿ ಗಿಡಗಳ ನರ್ಸರಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಗಿಡಗಳ ನಾಟಿಯನ್ನು ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿರುವ ಬಗ್ಗೆ ಮೈಸೂರು ನಗರ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್. ವಿ ರಾಜೀವ್ ರವರು ಮುಖ್ಯಮಂತ್ರಿಗಳಿಗೆ ಮಾಹಿತಿಯನ್ನು ನೀಡಿದರು ಸನ್ಮಾನ್ಯ ಮುಖ್ಯ ಮಂತ್ರಿಗಳು ಪೂಜ್ಯರ ಕಾರ್ಯಕ್ರಮಗಳ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ ಸೋಮಶೇಖರ್ ರವರು, ಮಾನ್ಯ ಸಂಸದರಾದ ಶ್ರೀ ಪ್ರತಾಪ್ ಸಿಂಹರವರು, ಮಾನ್ಯ ಶಾಸಕರಾದ ಶ್ರೀ ರಾಮದಾಸ ಎ.ರವರು ಉಪಸ್ಥಿತರಿದ್ದರು ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಪಿ. ಗಂಗಾಧರ ರೈರವರು ಮಾನ್ಯ ಮುಖ್ಯಮಂತ್ರಿಗಳಿಗೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಸಾಧನಾ ವರದಿಯನ್ನು ಸಲ್ಲಿಸಿದರು.
