ಆನೇಕಲ್ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಆನೇಕಲ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತಿಬೆಲೆ, ಆರಕ್ಷಕ ಠಾಣೆ ಅತ್ತಿಬೆಲೆ, ಬಿದರೆಗುಪ್ಪೆ ಗ್ರಾಮ ಪಂಚಾಯಿತಿ, ಹಾಲು ಉತ್ಪಾದಕರ ಸಹಕಾರಿ ಸಂಘಗಳು ಬಿದರಗುಪ್ಪೆ, ಮಲ್ಲೇನಹಳ್ಳಿ, ನರಸಾಪುರ, ಬೆಸ್ಟ್ ಆಸ್ಪತ್ರೆ ಚಂದಾಪುರ, ಸರ್ವ ಕನ್ನಡಪರ ಸಂಘಟನೆಗಳು ಆನೇಕಲ್ ತಾಲೂಕು, ರೈತ ಸಂಘಟನೆಗಳು ಆನೇಕಲ್ ತಾಲೂಕು, ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಆನೇಕಲ್ ತಾಲೂಕು, ಯುವಕ ಸಂಘಗಳು ಬಿದರಗುಪ್ಪೆ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಅತ್ತಿಬೆಲೆ ವಲಯ, ಸ್ಥಳೀಯ ಸಂಘ ಸಂಸ್ಥೆಗಳು, ನವಜೀವನ ಸಮಿತಿಗಳು ಆನೇಕಲ್ ತಾಲೂಕು ಹಾಗೂ ದಾನಿಗಳ ಸಹಕಾರದೊಂದಿಗೆ 1944ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಂಜುಂಡೇಶ್ವರ ಗಾಯತ್ರಿ ಕಲ್ಯಾಣ ಮಂಟಪ ಬಿದರಗುಪ್ಪೆಯಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಿ.ಜಿ ಆಂಜನಪ್ಪ ನಿರ್ದೇಶಕರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಬೆಂಗಳೂರು ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಶ್ರೀ ಬಿ ರಾಜೇಶ್ ಅಧ್ಯಕ್ಷರು 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀ ಉಮರಬ್ಬ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಬೆಂಗಳೂರು ಗ್ರಾಮಾಂತರ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಡಾl ಭಾರ್ಗವ್ ಅಸಿಸ್ಟೆಂಟ್ ಪ್ರೊಫೆಸರ್ ಬೆಂಗಳೂರು ಯೂನಿವರ್ಸಿಟಿ ಹಾಗೂ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ಆನೇಕಲ್, ಶ್ರೀಮತಿ ಅನುಪಮ ನಾರಾಯಣ ಅಧ್ಯಕ್ಷರು ಗ್ರಾಮ ಪಂಚಾಯಿತಿ ಬಿದರಗುಪ್ಪೆ, ಶ್ರೀಮತಿ ಡಾl ನಿರ್ಮಲ ಆರೋಗ್ಯ ಅಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತಿಬೆಲೆ, ಶ್ರೀ ಮಂಜುನಾಥ ಉಪಾಧ್ಯಕ್ಷರು 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ, ಶ್ರೀ ವರದರಾಜು ಉಪಾಧ್ಯಕ್ಷರು 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಶ್ರೀ ಶ್ರೀನಿವಾಸ್ ಗೌರವ ಸಲಹೆಗಾರರು 1944ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅತ್ತಿಬೆಲೆ ವಲಯ, ಶ್ರೀ ಸಂತೋಷ್ ರೆಡ್ಡಿ ಅಧ್ಯಕ್ಷರು ಹಾಲು ಉತ್ಪಾದಕರ ಘಟಕ ಅತ್ತಿಬೆಲೆ ಶ್ರೀ ನಾಗೇಶ್ ಪಿ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಆನೇಕಲ್ ತಾಲೂಕು ಇವರುಗಳು ಉಪಸ್ಥಿತರಿದ್ದು‌ ಶುಭವನ್ನು ಹಾರೈಸಿದರು.
ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಜಯಲಕ್ಷ್ಮಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ದರ್ಶನ್ ಎಂ.ಎಸ್ ಮೇಲ್ವಿಚಾರಕರು ಜನಜಾಗೃತಿ ವಿಭಾಗ ಪ್ರಾದೇಶಿಕ ಕಛೇರಿ ಬೆಂಗಳೂರು ಇವರುಗಳು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಶ್ರೀಮತಿ ಪುಷ್ಪ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅತ್ತಿಬೆಲೆ ವಲಯ, ಸೇವಾಪ್ರತಿನಿಧಿಗಳು ಅತ್ತಿಬೆಲೆ ವಲಯ, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಆನೇಕಲ್ ತಾಲೂಕು, ನವಜೀವನ ಸಮಿತಿ ಸದಸ್ಯರುಗಳು, ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಕಾರ್ಯಕ್ರಮವನ್ನು ಶ್ರೀಮತಿ ಸೌಮ್ಯ ಪ್ರಾರ್ಥಿಸಿ, ಶ್ರೀ ನಾಗೇಶ್ ಪಿ. ಯೋಜನಾಧಿಕಾರಿ ಸ್ವಾಗತಿಸಿ, ಕುಮಾರಿ ಸುಧಾ ಜ್ಞಾನವಿಕಾಸ ಸಮನ್ವಯಾಧಿಕಾರಿ ನಿರೂಪಿಸಿ, ಶ್ರೀಮತಿ ಯಶೋಧ ವಿಚಕ್ಷಣಾಧಿಕಾರಿ ವಂದಿಸಿದರು.