ಇಂಡಿ ತಾಲೂಕಿನಲ್ಲಿ 1827 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ

Janajagurthi Vedike News

ಪರಮಪೂಜ್ಯ ಡಾ| ಡಿ. ವಿರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಇಂಡಿ ತಾಲೂಕು ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಇಂಡಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ವಿಜಯಪುರ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನಾ ಕೆಂದ್ರ ಲಾಯಿಲ ಉಜಿರೆ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಶ್ರೀ ವಿಶ್ವಕರ್ಮ ವಿಕಾಸ ಸಂಸ್ಥೆ ಇಂಡಿ, ಸರ್ಕಾರಿ ಆಸ್ಪತ್ರೆ ಇಂಡಿ, ಆರಕ್ಷಕ ಠಾಣೆ ಶಹರ ಇಂಡಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇಂಡಿ ವಲಯ, ಸ್ಥಳೀಯ ಸಂಘ ಸಂಸ್ಥೆಗಳ ದಾನಿಗಳ ಸಹಕಾರದೊಂದಿಗೆ ನಡೆದ 1827 ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ ನಡೆಯಿತು. ಕುಟುಂಬ ದಿನ ಕಾರ್ಯಕ್ರಮವನ್ನು ಶ್ರೀ ರಾಜೇಶ್ ಕೆ. ಯೋಜನಾಧಿಕಾರಿಗಳು ಜನಜಾಗೃತಿ ಪ್ರಾದೇಶಿಕ ವಿಭಾಗ ಕಲಬುರ್ಗಿ ಇವರು ನೆರವೇರಿಸಿದರು.