ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ತ್ರೈಮಾಸಿಕ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ದೇವದಾಸ್ ಹೆಬ್ಬಾರ್, ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ನವೀನ್ ಅಮೀನ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇ ಗೌಡ, ತಾಲೂಕು ವೇದಿಕೆಯ ಅಧ್ಯಕ್ಷರುಗಳಾದ ಶ್ರೀ ಉದಯ್ ಕುಮಾರ್ ಹೆಗ್ಡೆ, ಶ್ರೀ ಸುಭಾಷ್ ಚಂದ್ರ ಚೌಟ, ಜಿಲ್ಲಾ ನಿರ್ದೇಶಕರಾದ ಶ್ರೀ ನಾಗರಾಜ್ ಶೆಟ್ಟಿ, ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು, ಹೆಬ್ರಿ, ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರು ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.