ಕರಾವಳಿ ಪ್ರಾದೇಶಿಕ ವಿಭಾಗದ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯನ್ನ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೆ ಗೌಡ ರವರು ಉದ್ಘಾಟಿಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ವೇದಿಕೆ ಅಧ್ಯಕ್ಷರಾದ ಅಚ್ಯುತ ಪೂಜಾರಿಯವರು ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳು / ನಿರ್ದೇಶಕರು ಶಿವರಾಯ ಪ್ರಭು ಹಾಗೂ ಕಾಪು, ಬ್ರಹ್ಮಾವರ, ಉಡುಪಿ ತಾಲೂಕುಗಳ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ನಿಕಟ ಪೂರ್ವ ತಾಲೂಕು ಅಧ್ಯಕ್ಷರುಗಳು ಹಾಗೂ ತಾಲೂಕು ಯೋಜನಾಧಿಕಾರಿಗಳು, ಜನಜಾಗೃತಿ ವಿಭಾಗದ ಯೋಜನಾಧಿಕಾರಿಗಳು ಮೇಲ್ವಿಚಾರಕರು ಉಪಸ್ಥಿತರಿದ್ದರು.
