ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಜನಜಾಗೃತಿ ವೇದಿಕೆ ಸಭೆ ಮತ್ತು ಮದ್ಯಮುಕ್ತ ಚುನಾವಣೆಯ ಕರಪತ್ರ ಬಿಡುಗಡೆ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಜನಜಾಗೃತಿ ವೇದಿಕೆಯ ಸಭೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿರವರು ದೀಪ ಬೆಳಗಿಸುವದರ ಮೂಲಕ ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ).ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ).ಪುತ್ತೂರು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಯೋಜನಾ ಕಛೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಹಾಗೂ ದ ಕ 2 ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಹಾಗೂ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದಂತಹ ಮಹಾಬಲ ರೈ ಹಾಗೂ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಶಶಿಧರ್ M ಮತ್ತು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರ ಗೌರವ ಉಪಸ್ಥಿತಿಯಲ್ಲಿ ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮದ್ಯಮುಕ್ತ ಚುನಾವಣೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ಕರಪತ್ರದಲ್ಲಿನ ವಿವರವನ್ನು ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ವಲಯದ ಜನಜಾಗೃತಿ ವಲಯಾದ್ಯಕ್ಷರು, ಮೇಲ್ವಿಚಾರಕರು, ನವಜೀವನ ಸಮಿತಿ ಪೋಷಕರು ಉಪಸ್ಥಿತರಿದ್ದರು.