ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲೆಯ, ಪುತ್ತೂರು ತಾಲೂಕಿನಲ್ಲಿ ನಡೆಯುತ್ತಿರುವ 1777ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಪ್ರಾದೇಶಿಕ ವಿಭಾಗದ ದಕ್ಷಿಣ ಕನ್ನಡ 2 ಜಿಲ್ಲೆಯ, ಪುತ್ತೂರು ತಾಲೂಕಿನ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ಸಭಾಂಗಣದಲ್ಲಿ ನಡೆಯುತ್ತಿರುವ 1777 ನೇ ಮಧ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಸಂಜೀವ ಮಠಂದೂರು ಮಾಜಿ ಶಾಸಕರು ವಿಧಾನಸಭಾ ಕ್ಷೇತ್ರ ಪುತ್ತೂರು ಶ್ರೀಯುತರು ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಲೋಕೇಶ್ ಹೆಗ್ಡೆ ಅಧ್ಯಕ್ಷರು ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು, ಶ್ರೀಮತಿ ಶಕುಂತಲಾ ಶೆಟ್ಟಿ ಮಾಜಿ ಶಾಸಕರು ವಿಧಾನಸಭಾ ಕ್ಷೇತ್ರ ಪುತ್ತೂರು, ಶ್ರೀ ಸಂಜೀವ ನಾಯಕ್ ಕಲ್ಲೇಗ, ಶ್ರೀ ಜೀವಂಧರ್ ಜೈನ್, ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿಯವರು,ಶ್ರೀ ಸಾಜ ರಾಧಾಕೃಷ್ಣ ಆಳ್ವ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರು ದಕ್ಷಿಣ ಕನ್ನಡ, ಶ್ರೀ ಪ್ರವೀಣ್ ಕುಮಾರ್ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ 2 ಜಿಲ್ಲೆ, ಶ್ರೀ ಮಹಾಬಲ ರೈ ವಳ್ಳತಡ್ಕ ನಿಕಟಪೂರ್ವ ಜನಜಾಗೃತಿ ಅಧ್ಯಕ್ಷರು ಪುತ್ತೂರು ತಾಲೂಕು, ಶ್ರೀ ಜಗದೀಶ್ ನೆಲ್ಲಿಕಟ್ಟೆ ಪುತ್ತೂರು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಭಟ್ ರವರು, ಡಾ.ನಾರಾಯಣ ಭಟ್ ಪುತ್ತೂರು, ಶ್ರೀ ಗಣೇಶ್ ಆಚಾರ್ಯ ಯೋಜನಾಧಿಕಾರಿಗಳು ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶ್ರೀ ಶಶಿಧರ್ ಎಮ್ ಯೋಜನಾಧಿಕಾರಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು,ಇವರು ಉಪಸ್ಥಿತರಿದ್ದು ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಯೋಜನೆಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ನವಜೀವನ ಸಮಿತಿ ಸದಸ್ಯರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು.