ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಸಚರಣೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿನ್ಸೆಂಟ್ ಪಾಯಾಸ್ ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಮತಿ ಶಾರದಾ ರೈ, ಶ್ರೀ ಕಿಶೋರ್ ಹೆಗ್ಡೆ, ಪ್ರಾಂಶುಪಾಲರಾದ ಶ್ರೀ ನವೀನ್ ಉಪಸ್ಥಿರಿದ್ದರು. 1300 ವಿದ್ಯಾರ್ಥಿಗಳು ಕಾರ್ಯಕ್ರಮ ಪ್ರಯೋಜನವನ್ನು ಪಡೆದುಕೊಂಡರು.
