ಎಲೆರಾಂಪುರ ಕಾರ್ಯಕ್ಷೇತ್ರದ ಕುಂಚಿಟಿಗರ ಸಭಾ ಭವನದಲ್ಲಿ ನಡೆದ 1898 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

Janajagurthi Vedike News

ಬೆಂಗಳೂರು ಪ್ರಾದೇಶಿಕ ವಿಭಾಗದ ತುಮಕೂರು 2 ಜಿಲ್ಲೆಯ ಕೊರಟಗೆರೆ ಯೋಜನಾ ಕಛೇರಿ ವ್ಯಾಪ್ತಿಯ ಎಲೆರಾಂಪುರ ಕಾರ್ಯಕ್ಷೇತ್ರದ ಕುಂಚಿಟಿಗರ ಸಭಾಭವನದಲ್ಲಿ ನಡೆದ 1898 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ಬೆಂಗಳೂರು ಪ್ರಾದೇಶಿಕ ವಿಭಾಗದ ಗೌರವಾನ್ವಿತ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀಯುತ ಶೀನಪ್ಪ ಎಂ. ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಹಿನ್ನಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಶಿಬಿರಾರ್ಥಿಗಳಿಗೆ, ಕುಟುಂಬ ಸದಸ್ಯರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ರಾಜ್ಯಧ್ಯಕ್ಷರು ಗೌರವಾನ್ವಿತ ಟ್ರಸ್ಟಿಗಳಾದ ಶ್ರೀಯುತ ವಿ. ರಾಮಸ್ವಾಮಿರವರು ಶಿಬಿರಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪೂಜ್ಯ ಡಾ| ವೀರೇಂದ್ರ ಹೆಗ್ಗಡೆಯವರು ಕೈಗೊಂಡಂತಹ ವಿವಿಧ ಕಾರ್ಯಕ್ರಮಗಳು, ಮದ್ಯವರ್ಜನ ಶಿಬಿರಗಳ ಬಗ್ಗೆ ತಿಳಿಸುವ ಮೂಲಕ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಉಮೇಶ್ ಚಂದ್ರ ಅಧ್ಯಕ್ಷರು 1898 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ರವರು ವಹಿಸಿ ಅಧ್ಯಕ್ಷೀಯ ನುಡಿಗಳನ್ನು ನುಡಿದರು. ಡಾ. ಶ್ರೀ ಶ್ರೀ ಶ್ರೀ ಹನುಮಂಥನಾಥ ಸ್ವಾಮೀಜಿಯವರು ಪೀಠಾಧ್ಯಕ್ಷರು ಕುಂಚಿಟಿಗರ ಮಹಾಸಂಸ್ಥಾನ ಮಠ ಎಲೆರಾಂಪುರ ಶ್ರೀಗಳು ದಿವ್ಯಸಾನಿದ್ಯವನ್ನು ವಹಿಸಿ ಶಿಬಿರಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಶುಭಾಷೀರ್ವಾದವನ್ನು ನೀಡಿದರು.