ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹುಬ್ಬಳ್ಳಿ ತಾಲೂಕು, ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಧಾರವಾಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್ ಜೆ ಎಂ ವಿ ಮಹಾಂತ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ರಾಯಪುರದಲ್ಲಿ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಧಾರವಾಡ ಜಿಲ್ಲಾ ಜನಜಾಗ್ರತಿ ಸದಸ್ಯರಾದ ಶ್ರೀಯುತ ಚಿದಾನಂದ ಮಾಯಾಚಾರ್ ರವರು ಉದ್ಘಾಟಿಸಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಪ್ರಾಮುಖ್ಯತೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಿದ ಕೊಡುಗೆಯ ಬಗ್ಗೆ ತಿಳಿಸಿದರು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಧಾರವಾಡ ಪ್ರಾದೇಶಿಕ ಕಚೇರಿಯ ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀಯುತ ಭಾಸ್ಕರ್ ರವರು ವಿದ್ಯಾರ್ಥಿಗಳು ದುಶ್ಚಟಕ್ಕೆ ಹೇಗೆ ಬಲಿಯಾಗುತ್ತಾರೆ ಇದರಿಂದಾಗುವ ಕೃತ್ಯಗಳ ಬಗ್ಗೆ ಮತ್ತು ಪರಿಣಾಮದ ಬಗ್ಗೆ ವಿವರವಾಗಿ ತಿಳಿಸಿ, ಗುಟ್ಕಾ, ಸಿಗರೇಟ್ ಮತ್ತು ಮಾದಕ ವಸ್ತುಗಳಲ್ಲಿ ರಾಸಾಯನಿಕಗಳು ಇರುತ್ತದೆ ,ಇದು ದೇಹಕ್ಕೆ ಹೋದರೆ ಯಾವ ರೀತಿ ಚಟಕ್ಕೆ ಬಲಿಯಾಗುತ್ತಾರೆ, ಇದರಿಂದ ಆರೋಗ್ಯದಲ್ಲಿ ಹಾಗೂ ಕೌಟುಂಬಿಕವಾಗಿ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದದ್ದು ದುಶ್ಚಟಕ್ಕೆ ಬಲಿಯಾದಲ್ಲಿ ಮುಂದಿನ ಭವಿಷ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಂತ ಮಹಾವಿದ್ಯಾಲಯದ ಪ್ರೊಫೆಸರ್ ಕೆ ಎಸ್ ಮೇಲ್ ಮಾಳಗಿರವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ನವನಗರ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶುಭಾ ಶೆಟ್ಟಿ, ಮಹಾಂತ ವಿದ್ಯಾಲಯದ ಉಪನ್ಯಾಸಕರು ಉಪಸ್ಥಿತರಿದ್ದರು
