ಔರಾದ್ : ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

Janajagurthi Vedike Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1966ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಔರಾದ್ ತಾಲೂಕು ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೀದರ್ ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯತ್, ಅಮರೇಶ್ವರ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಔರಾದ್, ತಾಲೂಕು ಪಂಚಾಯತ್ ಔರಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಔರಾದ್, ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ (ರಿ.) ತಾಲೂಕು ಘಟಕ, ಅಖಿಲ ಭಾರತಿ ವಿದ್ಯಾರ್ಥಿ ಪರಿಷತ್ ಔರಾದ್, ಕನ್ನಡ ಸಾಹಿತ್ಯ ಪರಿಷತ್ ಔರಾದ್, ಸ್ಥಳೀಯ ಸಂಘ ಸಂಸ್ಥೆಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಔರಾದ್ ತಾಲೂಕು ಹಾಗೂ ದಾನಿಗಳ ಸಹಕಾರದೊಂದಿಗೆ 1966ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ನಗರದ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಮಹೇಶ್ ಪಾಟೀಲ್ ಮಾನ್ಯ ತಹಶೀಲ್ದಾರರು ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿದರು.ಶ್ರೀ ಅಶೋಕ್ ಶೆಂಬೆಳ್ಳೆ ಅಧ್ಯಕ್ಷರು 1966ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಔರಾದ್ ತಾಲೂಕು ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಶ್ರೀ ರಾಜೇಶ್ ಕೆ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಕಲಬುರಗಿ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಶ್ರೀ ಮುರಳೀಧರ ಎಚ್.ಎಲ್ ಮಾನ್ಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ (ರಿ.) ಬೀದರ್ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಸರುಬಾಯಿ ಘುಳೆ ಅಧ್ಯಕ್ಷರು ಪಟ್ಟಣ ಪಂಚಾಯತ್ ಔರಾದ್, ಶ್ರೀ ಕಿರಣ್ ಪಾಟೀಲ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಔರಾದ್, ಶ್ರೀ ಶಿವಕುಮಾರ್ ಘಾಟೆ ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಔರಾದ್, ಶ್ರೀ ಗುಂಡಯ್ಯ ಸ್ವಾಮಿ ಮುಖಂಡರು ಔರಾದ್, ಶ್ರೀ ಬಂಡೆಪ್ಪ ಕಂಟೆ ಗುತ್ತಿಗೆದಾರರು ಔರಾದ್, ಶ್ರೀ ಶಿವರಾಜ್ ಅಲಮಾಜೆ ಮುಖಂಡರು ಔರಾದ್, ಡಾ. ಶಾಲಿವಾನ ಉದಗಿರೆ ಉಪಾಧ್ಯಕ್ಷರು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೀದರ್, ಶ್ರೀ ಶರಣಪ್ಪ ಪಾಟೀಲ್ ಮುಖಂಡರು ಔರಾದ್, ಶ್ರೀ ಸುಧಾಕರ್ ಕೊಳ್ಳೂರ ಯುವ ಮುಖಂಡರು, ಶ್ರೀ ರಾಘವೇಂದ್ರ ಯು. ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು ಇವರುಗಳು ಉಪಸ್ಥಿತರಿದ್ದು‌ ಶುಭವನ್ನು ಹಾರೈಸಿದರು.ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ಪ್ರೆಸಿಲ್ಲಾ ಡಿಸೋಜಾ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ಮಲ್ಲೇಶಪ್ಪ ಮೇಲ್ವಿಚಾರಕರು ಜನಜಾಗೃತಿ ವಿಭಾಗ ಪ್ರಾದೇಶಿಕ ಕಛೇರಿ ಕಲಬುರಗಿ ಇವರುಗಳು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಶ್ರೀ ಬಸವರಾಜ್ ಪೂಜಾರಿ ಕೃಷಿ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಔರಾದ್ ತಾಲೂಕು, ಸೇವಾಪ್ರತಿನಿಧಿಗಳು ಔರಾದ್ ತಾಲೂಕು, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು ಔರಾದ್ ತಾಲೂಕು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು ಔರಾದ್ ತಾಲೂಕು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ಕಾರ್ಯಕ್ರಮವನ್ನು ಸೇವಾಪ್ರತಿನಿಧಿ ಶ್ರೀಮತಿ ಸುರೇಖಾ ಪ್ರಾರ್ಥಿಸಿ, ಶ್ರೀ ವಿಲಾಸ್ ಪೂಜಾರಿ ಮೇಲ್ವಿಚಾರಕರು ನಿರೂಪಿಸಿ, ಶ್ರೀ ರಾಘವೇಂದ್ರ ಯು. ಯೋಜನಾಧಿಕಾರಿ ಸ್ವಾಗತಿಸಿ, ವಂದಿಸಿದರು.