ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ 1843 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike News

ಉಡುಪಿ ಪ್ರಾದೇಶಿಕ ವಿಭಾಗದ ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ 1843 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕಿನ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಸಚಿನ್ ಕುಮಾರ್ ಜೈನ್, ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಮಹೇಶ್ ಕೆ. ಸವಣೂರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ. ಎಸ್., ವಿಜಯ ಬ್ಯಾಂಕ್ ನ ನಿವೃತ್ತ ರೀಜನಲ್ ಮ್ಯಾನೇಜರ್ ರಾದ ಶ್ರೀ ಎ. ಕೃಷ್ಣ ರೈ ಪುಣ್ಚಪ್ಪಾಡಿ ತಳಮನೆ, ಜಿಲ್ಲಾ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್, ರೋಟರಿ ಕ್ಲಬ್ ಪುತ್ತೂರು ಇದರ ಮಾಜಿ ಅಧ್ಯಕ್ಷರಾದ ರೋ. ಪಿ. ಡಿ. ಕ್ರಷ್ಣಕುಮಾರ್ ರೈ ದೇವಸ್ಯ, ಗೌರವಾಧ್ಯಕ್ಷರಾದ ಶ್ರೀ ಗಿರಿಶಂಕರ ಸುಲಾಯ, ಎ ಪಿ ಎಂ ಸಿ ಮಾಜಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು, ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ಮೇದಪ್ಪ ಗೌಡ ಎನ್., ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ, ಶಿಬಿರಾಧಿಕಾರಿ ಶ್ರೀ ದೇವಿಪ್ರಸಾದ್ ಸುವರ್ಣ, ಆರೋಗ್ಯ ಸಹಾಯಕಿ ಶ್ರೀಮತಿ ನೇತ್ರಾವತಿ ಹಾಗೂ ಕಡಬ ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಒಕ್ಕೂಟದ ಪಧಾದಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು, ಊರಿನ ಹಿರಿಯರು ಉಪಸ್ಥಿತರಿದ್ದರು.