ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಕಲಬುರ್ಗಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಕಲಬುರ್ಗಿ ತಾಲೂಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರ್ಗಿ, ಜಿಲ್ಲಾ ನಿಯಂತ್ರಣ ತಂಬಾಕು ಕೋಶ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ “ಗಾಂಧೀ ಸ್ಮರಣೆ ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮ” ವನ್ನು ಶ್ರೀ ದತ್ತಾತ್ರೇಯ ಪಾಟೀಲ ರೇವೂರ ಮಾನ್ಯ ಅಧ್ಯಕ್ಷರು ಕೆ.ಕೆ.ಆರ್. ಡಿ.ಬಿ .ಹಾಗೂ ಜನಪ್ರಿಯ ಶಾಸಕರು ದಕ್ಷಿಣ ಮತ ಕ್ಷೇತ್ರ ಕಲಬುರ್ಗಿ ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳು ಕಲಬುರ್ಗಿ ತಾಲೂಕಿನಲ್ಲಿ ಅತ್ಯಂತ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಮಾತಾಡಿದರು. PMGDISHA ಪ್ರಮಾಣ ಪತ್ರ ವಿತರಣೆಯನ್ನು ಮಾನ್ಯ ಸತೀಶ್ ಸುವರ್ಣ ಜಿಲ್ಲಾ ನಿರ್ದೇಶಕರು ವಿತರಿಸಿ ಯೋಜನೆಯ ಅನೇಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ರಾಜೇಶ್ ಕೆ. ಯೋಜನಾಧಿಕಾರಿಯವರು ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಕಲಬುರ್ಗಿ ಮಾತಾಡಿದರು. ಈ ಸಂದರ್ಭದಲ್ಲಿ ಗೌರವ ಉಪಸ್ಥಿತಿಯಲ್ಲಿ ಸುಭಾಷ್ ಶಿವರಾಜ್ ಮಠ , ಶ್ರೀ ಪ್ರವೀಣ್ ಯೋಜನಾಧಿಕಾರಿಯವರು.
