ಉಡುಪಿ ಪ್ರಾದೇಶಿಕ ವಿಭಾಗದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಡಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷರಾದ ಶ್ರೀ ದಯಾನಂದ ಹೆಜಮಾಡಿಯವರು ಉದ್ಘಾಟಿಸಿದರು.
