ಬೆಳಗಾವಿ ಜಿಲ್ಲಾ ಯೋಜನಾ ವ್ಯಾಪ್ತಿಯ ಕಿತ್ತೂರ ತಾಲೂಕಿನಲ್ಲಿ ಕಲ್ಮಠ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಅಕ್ಟೋಬರ್. 2 ಗಾಂಧಿ ಜಯಂತಿ ಪ್ರಯುಕ್ತ ಗಾಂಧಿ ನಮನ ಹಾಗೂ ನವಜೀವನೋತ್ಸವ ಕಾರ್ಯಕ್ರಮ ನಡೆಯಿತು. ತಶಿಲ್ದಾರ್ ಶ್ರೀ ಸೋಮಲಿಂಗಪ್ಪ ಹಾಲಗಿ ಉದ್ಘಾಟಿಸಿದರು, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರು, ಜಿಲ್ಲಾ ನಿರ್ದೇಶಕರು, ಜನಜಾಗೃತಿ ವೇದಿಕೆ ಸದಸ್ಯರು, ನವಜೀವನ ಸದಸ್ಯರು ಉಪಸ್ಥಿತರಿದ್ದರು.
