ಕುಣಿಗಲ್ ತಾಲೂಕಿನಲ್ಲಿ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ

Janajagurthi Vedike News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕುಣಿಗಲ್ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹುಲಿಯೂರುದುರ್ಗ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹುಲಿಯೂರುದುರ್ಗ ಹಾಗೂ ಅಣತಹಳ್ಳಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ| ಹೇಮಾವತಿ ವಿ. ಹೆಗ್ಗಡೆಯವರ ಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ 1904 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭ ಹುಲಿಯೂರುದುರ್ಗ ಹಳೆಪೇಟೆಯ ಪುಣ್ಯಕೋಟಿ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಶ್ರೀ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ ಅಂಕನಹಳ್ಳಿ ಮಠ ಇವರು ನೆರವೇರಿಸಿ ಉದ್ಘಾಟನಾ ಮಾತುಗಳನ್ನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ವಿನೂತನ ಕಾರ್ಯಕ್ರಮವೇ ಈ ಮದ್ಯವರ್ಜನ ಶಿಬಿರ. ಸಮಾಜದಲ್ಲಿ ಇದುವರೆಗೂ ಯಾರು ಮಾಡದಿರುವ ವಿಶೇಷವಾದ ಕಾರ್ಯಕ್ರಮವನ್ನು ಜಗತ್ತಿನಲ್ಲಿ ಯಾರಾದರೂ ಮಾಡುವವರಿದ್ದರೆ ಅದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಂದರು. ಸಂಸ್ಥೆಯ ಮುಖೇನ ಸಮುದಾಯದ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಮತ್ತು ಜನತೆಯಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮಗಳೆಲ್ಲವು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿ ಆಶೀರ್ವಚನ ನೀಡಿದರು. ಶ್ರೀ ಹೆಚ್. ಜಿ. ನಾಗೇಶ್ ಅಧ್ಯಕ್ಷರು 1904 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹುಲಿಯೂರುದುರ್ಗ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು. ಶ್ರೀ ತಿಮ್ಮಯ್ಯ ನಾಯ್ಕ್ ಯೋಜನಾಧಿಕಾರಿ ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಸತೀಶ್ ಸುವರ್ಣ ಗೌರವಾನ್ವಿತ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ತುಮಕೂರು ಜಿಲ್ಲೆ ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮ ಅಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು-ಮನ-ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರಂಭ, ವಿಸ್ತರಣೆಯ ಅನುಭವ ಹಾಗೂ ಅಸಾಮಾನ್ಯ ಸಾಧನೆಗಳ ಪರಿಚಯದೊಂದಿಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ. ಸಮುದಾಯದ ಕಾರ್ಯಕ್ರಮಗಳಲ್ಲಿ ಪೂಜ್ಯರ ಅತೀ ಪ್ರೀತಿಯ ಕಾರ್ಯಕ್ರಮವಾದ ಮದ್ಯವರ್ಜನ ಶಿಬಿರವನ್ನು ಸಂಘಟಿಸಿದ ವ್ಯವಸ್ಥಾಪನಾ ಸಮಿತಿ ಹಾಗೂ ಜನಜಾಗೃತಿ ವೇದಿಕೆಯ ಅತ್ಯುತ್ತಮ ಸಹಕಾರವನ್ನು ಸ್ಮರಿಸಿ ಕಾರ್ಯಕ್ರಮಕ್ಕೆ ಶುಭಾಶಯವನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಹೆಚ್. ಎನ್. ನಟರಾಜ್ ಸದಸ್ಯರು ಜಿಲ್ಲಾ ಜನಜಾಗೃತಿ ವೇದಿಕೆ ತುಮಕೂರು, ಶ್ರೀ ವಿ. ಎನ್. ಹುಚ್ಚವೀರಯ್ಯ ಗೌರವ ಸಲಹೆಗಾರರು 1904 ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹುಲಿಯೂರುದುರ್ಗ, ಶ್ರೀ ಹೆಚ್. ಎಸ್. ನಟರಾಜ್ ಮಾಲೀಕರು ಪುಣ್ಯಕೋಟಿ ಸಭಾಭವನ ಹುಲಿಯೂರುದುರ್ಗ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಕಾರ್ಯಕ್ರಮದಲ್ಲಿ ಶ್ರೀ ನಂದಕುಮಾರ್ ಪಿ. ಪಿ. ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀಮತಿ ನೇತ್ರಾವತಿ ಆರೋಗ್ಯ ಸಹಾಯಕಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ದರ್ಶನ್ ಮೇಲ್ವಿಚಾರಕರು ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಂಗಳೂರು ಇವರು ಉಪಸ್ಥಿತರಿದ್ದರು. ಶ್ರೀ ಸಂಪತ್ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಅಣತಹಳ್ಳಿ ವಲಯ, ಶ್ರೀ ವಸಂತ್ ಎಲ್. ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಹುಲಿಯೂರುದುರ್ಗ ವಲಯ, ತಾಲೂಕಿನ ಎಲ್ಲಾ ಮೇಲ್ವಿಚಾರಕರುಗಳು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ನವಜೀವನ ಸಮಿತಿ ಸದಸ್ಯರುಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.