ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾII ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾII ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, 1954ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಶಾಲನಗರ ವಲಯ ಇವರ ಆಶ್ರಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸೋಮವಾರಪೇಟೆ / ಕುಶಾಲನಗರ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಕೊಡಗು ಜಿಲ್ಲೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಲಾಯಿಲ ಉಜಿರೆ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಮಾರ್ಗದರ್ಶನದೊಂದಿಗೆ ಕೊಡವ ಸಮಾಜ ಕುಶಾಲನಗರ, ನವಜೀವನ ಸಮಿತಿಗಳು ಸೋಮವಾರಪೇಟೆ, ಆರೋಗ್ಯ ಇಲಾಖೆ ಕುಶಾಲನಗರ, ಆರಕ್ಷಕ ಇಲಾಖೆ ಕುಶಾಲನಗರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳು ಸೋಮವಾರಪೇಟೆ, ಪುರಸಭೆ ಕುಶಾಲನಗರ, ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಕುಶಾಲನಗರ, ವರ್ತಕರ ಸಂಘ (ರಿ.) ಕುಶಾಲನಗರ, ಸ್ಥಳೀಯ ಸಮಸ್ತ ಭಜನಾ ಮಂಡಳಿಗಳು ಕುಶಾಲನಗರ, ಹಾಲು ಉತ್ಪಾದಕರ ಸಹಕಾರ ಸಂಘ ಕೂಡುಮಂಗಳೂರು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಕುಶಾಲನಗರ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ದಾನಿಗಳ ಸಹಕಾರದೊಂದಿಗೆ 1954ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭವು ಕೊಡವ ಸಮಾಜ ಕುಶಾಲನಗರದಲ್ಲಿ ಸಂಪನ್ನಗೊಂಡಿತು.ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯಲ್ಲಿದ್ದ ಅತಿಥಿಗಳು ನೆರವೇರಿಸಿದರು
ಶ್ರೀ ವಿ.ಡಿ ಪುಂಡರೀಕಾಕ್ಷ ಗೌರವಾಧ್ಯಕ್ಷರು 1954ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಶಾಲನಗರ ವಲಯ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ಮಾತುಗಳನ್ನಾಡಿದರು.ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಕಛೇರಿ ಬೆಳ್ತಂಗಡಿ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ದಿವ್ಯ ಸಾನಿಧ್ಯ ವಹಿಸಿದ ಶ್ರೀ ಶ್ರೀ ಶ್ರೀ ಮಲ್ಲೇಶ ಸ್ವಾಮೀಜಿಗಳು ವಿರಕ್ತ ಮಠ ತೊರೆನೂರು ಇವರು ಮಾತನಾಡಿ ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಸಾಮಾನ್ಯ ಸಾಧನೆ, ಸಮುದಾಯದ ಕಾರ್ಯಕ್ರಮಗಳಾದ ನಮ್ಮೂರು ನಮ್ಮ ಕೆರೆ, ರುದ್ರಭೂಮಿ ಅನುದಾನ, ಶಿಥಿಲಗೊಂಡ ದೇವಸ್ಥಾನಗಳ ಜೀರ್ಣೋದ್ಧಾರ, ಶಾಲೆಗಳಿಗೆ ಪೀಠೋಪಕರಣ ಒದಗಣೆ, ಜ್ಞಾನದೀಪ ಕಾರ್ಯಕ್ರಮದ ಮುಖೇನ ಗೌರವ ಶಿಕ್ಷಕರ ಒದಗಣೆ, ಶಿಷ್ಯವೇತನ, ಮಾಸಾಶನ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮತ್ತು ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ಧಾರ್ಮಿಕ ಕ್ಷೇತ್ರ ಹೀಗೆ ಹಲವು ವಿಭಾಗಗಳಲ್ಲಿ ಜನಮೆಚ್ಚುಗೆಯೊಂದಿಗೆ ಸಂಸ್ಥೆಯು ವಿಶ್ವ ಮಾನ್ಯತೆಯನ್ನು ಪಡೆದುಕೊಂಡಿದೆ ಎಂದು ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರನ್ನು ಶ್ಲಾಘಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ವಾಂಚಿರ ಮನು ನಂಜುಂಡ ಅಧ್ಯಕ್ಷರು 1954ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಕುಶಾಲನಗರ, ಶ್ರೀಮತಿ ಲೀಲಾವತಿ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕೊಡಗು ಜಿಲ್ಲೆ, ಶ್ರೀ ವಿ.ಪಿ ಶಶಿಧರ್ ಅಧ್ಯಕ್ಷರು ಕರ್ನಾಟಕ ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿ ಕುಶಾಲನಗರ ತಾಲೂಕು, ಶ್ರೀ ಎ.ಟಿ ರಂಗಸ್ವಾಮಿ ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಶ್ರೀಮತಿ ಜಯಲಕ್ಷ್ಮಿ ಚಂದ್ರು ಅಧ್ಯಕ್ಷರು ಪುರಸಭೆ ಕುಶಾಲನಗರ, ಶ್ರೀ ದೀಪಕ್ ನಾಯರ್ ಅಧ್ಯಕ್ಷರು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲೆ, ಶ್ರೀ ಚಂದ್ರಮೋಹನ್ ಎಂ.ಎನ್ ಸದಸ್ಯರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆ, ಶ್ರೀ ಹನುಮಂತಪ್ಪ ಅಂಗಡಿ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸೋಮವಾರಪೇಟೆ ತಾಲೂಕು ಇವರುಗಳು ಉಪಸ್ಥಿತರಿದ್ದು ಶುಭವನ್ನು ಹಾರೈಸಿದರು.ಶ್ರೀ ನಂದಕುಮಾರ್ ಪಿ ಪಿ ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಶ್ರೀ ವೆಂಕಟೇಶ್ ಆರೋಗ್ಯ ಸಹಾಯಕರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರು ಎಂಟು ದಿನಗಳ ಮದ್ಯವರ್ಜನ ಶಿಬಿರವನ್ನು ನಿರ್ವಹಿಸಲಿದ್ದಾರೆ.ಶ್ರೀ ನಾಗರಾಜ್ ಕೆ.ಪಿ ಮೇಲ್ವಿಚಾರಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಕುಶಾಲನಗರ ವಲಯ, ಸೇವಾಪ್ರತಿನಿಧಿಗಳು ಕುಶಾಲನಗರ ವಲಯ, ಒಕ್ಕೂಟದ ಅಧ್ಯಕ್ಷರು / ಪದಾಧಿಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರುಗಳು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸೋಮವಾರಪೇಟೆ ತಾಲೂಕು, ನವಜೀವನ ಸಮಿತಿ ಸದಸ್ಯರುಗಳು ಸೋಮವಾರಪೇಟೆ ತಾಲೂಕು ಮತ್ತು ಸಾರ್ವಜನಿಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಅಮೃತಕಲಾ ಪ್ರಾರ್ಥಿಸಿ, ಶ್ರೀ ಹನುಮಂತಪ್ಪ ಅಂಗಡಿ ಯೋಜನಾಧಿಕಾರಿ ಸ್ವಾಗತಿಸಿ, ಶ್ರೀ ನಾಗರಾಜ್ ಕೆ.ಪಿ ಮೇಲ್ವಿಚಾರಕರು ನಿರೂಪಿಸಿ, ವಂದಿಸಿದರು.
